ಉಡುಪಿ: ಕೃಷ್ಣ ವೇಷ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

ಉಡುಪಿ, ಸೆ.26: ಚಿಣ್ಣರ ಸಂತರ್ಪಣೆಯ ಶಾಲೆಗಳಲ್ಲಿ ನಡೆದ ಕೃಷ್ಣ ವೇಷ ಸ್ಪರ್ಧೆಯ ವಿಜೇತ ಮಕ್ಕಳಿಗೆ ಪರ್ಯಾಯ ಪೇಜಾವರ ಮಠದ ವತಿಯಿಂದ ಮಂಗಳವಾರ ಶ್ರೀಕೃಷ್ಣ ಮಠದ ಮಧ್ವಮಂಟಪದಲ್ಲಿ ನಡೆದ ಸರಳ ಸಮಾರಂಭ ದಲ್ಲಿ ಬಹುಮಾನ ವಿತರಿಸಲಾಯಿತು.
ಪರ್ಯಾಯ ಪೇಜಾವರ ಮಠಾಧೀಶ ಶ್ರೀವಿಶ್ವೇಶ ತೀರ್ಥ ಶ್ರೀಪಾದರು ಹಾಗೂ ಕಿರಿಯ ಯತಿ ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀಪಾದರು ವಿಜೇತ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಚಿಣ್ಣರ ಸಂತರ್ಪಣೆ ಶಾಲೆಗಳ ಒಕ್ಕೂಟದ ಅಧ್ಯಕ್ಷರಾದ ಅಶೋಕ್ ಮಾಡ, ಚಿಣ್ಣರ ಸಂತರ್ಪಣೆಯ ಕಾರ್ಯದರ್ಶಿ ಎಂ. ಶ್ರೀನಿವಾಸ ರಾವ್, ಮಠದ ದಿವಾನರಾದ ರಘುರಾಮ ಆಚಾರ್ಯ ಉಪಸ್ಥಿತರಿದ್ದರು.
Next Story





