ನಮ್ಮ ಇಲಾಖೆ ಭಯೋತ್ಪಾದಕರಿಗೆ ರಕ್ಷಣೆ ನೀಡುತ್ತಿದೆ: ಪಾಕ್ ಗುಪ್ತಚರ ಅಧಿಕಾರಿಯ ಆರೋಪ

ಇಸ್ಲಾಮಾಬಾದ್, ಸೆ.26: ಪಾಕಿಸ್ತಾನದ ಗುಪ್ತಚರ ಇಲಾಖೆಯು ಭಯೋತ್ಪಾದಕರಿಗೆ ರಕ್ಷಣೆ ನೀಡುತ್ತಿದೆ ಎಂದು ಇಲಾಖೆಯ ಅಧಿಕಾರಿಯೊಬ್ಬರು ಆರೋಪಿಸಿರುವುದಾಗಿ ವರದಿಯಾಗಿದೆ. ಈ ಬಗ್ಗೆ ಆ ಅಧಿಕಾರಿ ಸೂಕ್ತ ತನಿಖೆ ನಡೆಸುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಗುಪ್ತಚರ ಇಲಾಖೆಯ ಅಸಿಸ್ಟಂಟ್ ಸಬ್ ಇನ್ ಸ್ಪೆಕ್ಟರ್ ಮಲಿಕ್ ಮುಖ್ತಾರ್ ಅಹ್ಮದ್ ಶಹಝಾದ್ ಹಿರಿಯ ಅಧಿಕಾರಿಗಳು ಶಂಕಿತ ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಈ ಪ್ರಕರಣದ ತನಿಖೆಯನ್ನು ನಡೆಸುವಂತೆ ಐಎಸ್ ಐಗೆ ಸೂಚಿಸುವಂತೆ ಅವರು ಇಸ್ಲಾಮಾಬಾದ್ ಹೈಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯಲ್ಲಿ ಕೋರಿದ್ದಾರೆ.
ಬೇರೆ ಬೇರೆ ದೇಶಗಳ ಭಯೋತ್ಪಾದಕ ಗುಂಪುಗಳ ಬಗ್ಗೆ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದವರು ಅರೋಪಿಸಿದ್ದಾರೆ.
Next Story





