ಧಾರ್ಮಿಕ ದತ್ತಿ ಇಲಾಖೆಯಿಂದ ಅರ್ಜಿ ಆಹ್ವಾನ
ಉಡುಪಿ, ಸೆ.26: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಯಮದಂತೆ ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್ ಸಭೆಯ ನಿರ್ಣಯದಂತೆ ಉಡುಪಿ ಜಿಲ್ಲೆಯಲ್ಲಿರುವ ಬಿ ಪ್ರವರ್ಗದ 2 ಮತ್ತು ಸಿ ಪ್ರವರ್ಗದ 52 ಅಧಿಸೂಚಿತ ಸಂಸ್ಥೆಗಳು/ದೇವಸ್ಥಾನಗಳಿಗೆ ವ್ಯವಸ್ಥಾಪನಾ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾಧಿಗಳು/ಸಾರ್ವಜನಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕನಿಷ್ಠ 25 ವರ್ಷ ವಯಸ್ಸಾಗಿರುವ ಆಸಕ್ತ ಭಕ್ತರು ಯಾವುದೇ ಒಂದು ಅಧಿಸೂಚಿತ ಸಂಸ್ಥೆಯ/ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವ ಕೋರಿ ಅರ್ಜಿಯನ್ನು ನಿಗದಿತ ನಮೂನೆ1(ಬಿ) (22ನೇ ನಿಯಮ) ನಮೂನೆಯಲ್ಲಿ ಭರ್ತಿ ಮಾಡಿ ಅ.21ರೊಳಗೆ ನೇರವಾಗಿ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಉಡುಪಿ ಕೊಠಡಿ ಸಂಖ್ಯೆ 206 ‘ಬಿ’ ಬ್ಲಾಕ್, ಮೊದಲನೆ ಮಹಡಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ ವುಣಿಪಾಲ ಉಡುಪಿ ಇಲ್ಲಿಗೆ ಸಲ್ಲಿಸಬೇಕು.
ನಿಗದಿತ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ಉಡುಪಿ ದೂರವಾಣಿ ಸಂಖ್ಯೆ:0820-2575660 ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.





