ರಸ್ತೆ ಅಡ್ಡಗಟ್ಟಿ ದರೋಡೆ
ಬೆಂಗಳೂರು, ಸೆ.26: ಬೈಕ್‌ನಲ್ಲಿ ಹೋಗುತ್ತಿದ್ದ ಇಬ್ಬರು ಸವಾರರನ್ನು ಅಡ್ಡಗಟ್ಟಿದ ನಾಲ್ವರು ಅವರ ಮೇಲೆ ಹಲ್ಲೆ ನಡೆಸಿ ನಾಲ್ಕು ಮೊಬೈಲ್, ನಗದು ಕಸಿದು ಪರಾರಿಯಾಗಿರುವ ಘಟನೆ ಇಲ್ಲಿನ ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ರಿಂಗ್‌ರಸ್ತೆಯ ಹೆಣ್ಣೂರು ಜಂಕ್ಷನ್ ಬಳಿ ಶಶಾಂಕ್ ತನ್ನ ಸ್ನೇಹಿತ ರಾಕೇಶ್‌ನೊಂದಿಗೆ ಇಂದು ಬೆಳಗ್ಗೆ 4.30ರ ಸುಮಾರಿಗೆ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಎರಡು ಬೈಕ್‌ಗಳಲ್ಲಿ ಇವರನ್ನು ಹಿಂಬಾಲಿಸಿದ ನಾಲ್ವರು, ಅಡ್ಡಗಟ್ಟಿ ಅವರ ಮೇಲೆ ಹಲ್ಲೆ ನಡೆಸಿ ಬೆದರಿಸಿ ಮೊಬೈಲ್‌ಗಳು ಹಾಗೂ ಹಣ ಕಸಿದು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಶಶಾಂಕ್ ಕೆಜಿ ಹಳ್ಳಿ ಠಾಣೆಗೆ ದೂರು ನೀಡಿದ್ದು, ದರೋಡೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story





