Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೆ.28 ರಂದು ರಾಷ್ಟ್ರೀಯ ವಿಚಾರ ಸಂಕಿರಣ

ಸೆ.28 ರಂದು ರಾಷ್ಟ್ರೀಯ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ26 Sept 2017 10:30 PM IST
share

ಬೆಂಗಳೂರು, ಸೆ.26: 'ಹಿಂದೂ-ವೀರಶೈವ -ಲಿಂಗಾಯತ ಧರ್ಮ' ಪರಿವರ್ತನೆಯ ಪರ್ವ ಎಂಬ ವಿಷಯ ಕುರಿತು ಬೆಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದಿಂದ ಸೆ. 28ರಂದು ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಮುಖಂಡ ರಮೇಶ್ ಬಾಗಿ, ರಾಜ್ಯದಲ್ಲಿ ಎದ್ದಿರುವ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಸಮಾನತೆಯ ಹರಿಕಾರ ಬಸವಣ್ಣರನ್ನೇ ಮುಖ್ಯವಾಗಿ ಇಟ್ಟುಕೊಂಡಿರುವುದರಿಂದ ಸಾಹಿತ್ಯ, ಸಂಸ್ಕೃತಿ ಹಾಗೂ ಸಮಾಜದ ವಿದ್ಯಾರ್ಥಿಗಳಲ್ಲಿ ಕುತೂಹಲ ಮೂಡಿಸಿದೆ. ಲಿಂಗಾಯತ, ವೀರಶೈವ ಮತ್ತು ಹಿಂದೂ ಧರ್ಮಗಳ ಕುರಿತು ನಡೆಯುತ್ತಿರುವ ಹೊಸ ಕಾಲದ ವಾಗ್ವಾದಗಳು ಅಧ್ಯಯನಾಕಾಂಕ್ಷಿ ಮನಸ್ಸುಗಳನ್ನು ಸೆಳೆದಿವೆ. ಈ ಹಿನ್ನೆಲೆಯಲ್ಲಿ ಈ ವಿಚಾರ ಸಂಕಿರಣ ಸಹಕಾರಿಯಾಗಲಿದೆ ಎಂದರು.

ದೇಶದ ಪ್ರತಿಯೊಂದು ಬೆಳವಣಿಗೆಯಲ್ಲಿ ವಿಶ್ವವಿದ್ಯಾನಿಲಯಗಳ ಪಾತ್ರ ಮಹತ್ವವಾದ ಪಾತ್ರ ನಿರ್ವಹಿಸುತ್ತದೆ. ಈ ಹಿನ್ನೆಲೆಯಲ್ಲಿ ಈ ವಿಚಾರ ಸಂಕಿರಣವನ್ನು ಪರ ಅಥವಾ ವಿರುದ್ಧವಲ್ಲದೆ, ಅಧ್ಯಯನ ಹಾಗೂ ರಾಜಕೀಯ ಪಕ್ಷಗಳ, ಧಾರ್ಮಿಕ ಚಳವಳಿಯ ಹಸ್ತಕ್ಷೇಪ ಕುರಿತು ತಿಳಿಯುವ ನಿಟ್ಟಿನಲ್ಲಿ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ಹೇಳಿದರು.

ವಿಚಾರ ಸಂಕಿರಣವನ್ನು ಬೆಂಗಳೂರು ವಿವಿ ಕುಲಪತಿ ಡಾ.ಎಚ್.ಎನ್.ರಮೇಶ್ ಉದ್ಘಾಟಿಸಲಿದ್ದು, ಬಸವಧರ್ಮ ಪೀಠದ ಜಗದ್ಗುರು ಮಾತೆ ಮಹಾದೇವಿ, ಬೆಂಗಳೂರು ಕೇಂದ್ರ ವಿವಿ ಕುಲಪತಿ ಪ್ರೊ.ಎಸ್.ಜಾಫೆಟ್, ಉತ್ತರ ವಿವಿ ಕುಲಪತಿ ಡಾ.ಟಿ.ಡಿ.ಕೆಂಪರಾಜು ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ. ಈ ವೇಳೆ ಧರ್ಮ ಮತ್ತು ಜಾತಿ ವ್ಯವಸ್ಥೆ ಕುರಿತು ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ್, ಚಿಂತಕ ಡಾ.ಬಂಜಗೆರೆ ಜಯಪ್ರಕಾಶ್, ಧರ್ಮ ಮತ್ತು ರಾಜಕಾರಣ ಕುರಿತು ಪತ್ರಕರ್ತ ಪಾರ್ವತೀಶ್ ಬಿಳಿದಾಳೆ ವಿಷಯ ಮಂಡಿಸಲಿದ್ದಾರೆ ಎಂದು ತಿಳಿಸಿದರು. 

ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಮುಖಂಡರಾದ ವೆಂಕಟಾಚಲ, ಗೋಪಾಲ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X