ದುಷ್ಕರ್ಮಿಗಳಿಂದ ವೈದ್ಯರ ಮೇಲೆ ಹಲ್ಲೆ
ಮದ್ದೂರು, ಸೆ.26: ಕರ್ತವ್ಯನಿರತ ಪಟ್ಟಣದ ಸಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಮೇಲೆ ಸೋಮವಾರ ತಡರಾತ್ರಿ ಪಾನಮತ್ತ ವ್ಯಕ್ತಿಗಳು ಹಲ್ಲೆ ನಡೆಸಿದ್ದಾರೆ.
ಕಾರಿನಲ್ಲಿ ಬಂದ ನಾಲ್ವರು ಅಪರಿಚಿತ ವ್ಯಕ್ತಿಗಳು ಏಕಾಏಕೀ ಆಸ್ಪತ್ರೆಗೆ ನುಗ್ಗಿ ಕಿವಿಮೂಗು ಗಂಟಲು ತಜ್ಞ ಡಾ.ಶಿವಕುಮಾರ್ ಅವರ ಕುತ್ತಿಗೆಪಟ್ಟಿ ಹಿಡಿದು ಎಳೆದಾಡಿ ಹಲ್ಲೆ ನಡೆಸಿದ್ದು, ಬಿಡಿಸಲು ಬಂದ ಆಸ್ಪತ್ರೆ ಸಿಬ್ಬಂದಿಯ ಮೇಲೂ ಹಲ್ಲೆ ನಡೆಸಿದ್ದಾರೆ.
ತಮ್ಮ ಮೇಲೆ ನಡೆದ ಹಲ್ಲೆಯ ಹಿನ್ನೆಲೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ಮಂಗಳವಾರ ಕೆಲಸ ಸ್ಥಗಿತಗೊಳಿಸಿದ್ದರಿಂದ ರೋಗಿಗಳು ಚಿಕಿತ್ಸೆ ಇಲ್ಲದೆ ತೀವ್ರ ತೊಂದರೆ ಅನುಭವಿಸಿದರು.
ಸ್ಥಳಕ್ಕಾಗಮಿಸಿದ ಜಿಲ್ಲಾ ಮಲೇರಿಯಾ ನಿಯಂತ್ರಣಾ ಅಧಿಕಾರಿ ಡಾ.ಕೆ.ಜಿ. ಭವಾನಿಶಂಕರ್, ಜಿಲ್ಲಾ ಕ್ಷಯರೋಗ ನಿಯಂತ್ರಣಾ ಅಧಿಕಾರಿ ಡಾ. ರೋಚನಾ ಧರಣಿನಿರತ ವೈದ್ಯರ ಮನವೊಲಿಸಿದರು.
ಈ ಸಂಬಂಧ ಪಟ್ಟಣ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
Next Story





