Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉನ್ನತ ಶಿಕ್ಷಣದಲ್ಲಿ ತ್ವರಿತಗತಿಯ...

ಉನ್ನತ ಶಿಕ್ಷಣದಲ್ಲಿ ತ್ವರಿತಗತಿಯ ಬದಲಾವಣೆ ಅಗತ್ಯ: ಡಾ.ಶೇರಿಗಾರ್

‘ಉನ್ನತ ಶಿಕ್ಷಣದಲ್ಲಿ ಗುಣಮಟ್ಟದ ವರ್ಧನೆ’ ಕುರಿತ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ27 Sept 2017 6:52 PM IST
share
ಉನ್ನತ ಶಿಕ್ಷಣದಲ್ಲಿ ತ್ವರಿತಗತಿಯ ಬದಲಾವಣೆ ಅಗತ್ಯ: ಡಾ.ಶೇರಿಗಾರ್

ಉಡುಪಿ, ಸೆ.27: ಉನ್ನತ ಶಿಕ್ಷಣ ಎಂಬುದು ಅತ್ಯಂತ ಚಲನಶೀಲ ಆಗಿ ರುವುದರಿಂದ ತ್ವರಿತಗತಿಯಲ್ಲಿ ಅದರ ಬದಲಾವಣೆ ಆಗಬೇಕು. ಅದಕ್ಕೆ ನಾವು ಸ್ಪಂದಿಸದಿದ್ದರೆ ಅದು ನಿಂತ ನೀರಾಗುತ್ತದೆ. ಆದುದರಿಂದ ಉನ್ನತ ಶಿಕ್ಷಣದಲ್ಲಿ ಗುಣಮಟ್ಟ ವೃದ್ಧಿಸುವ ಕುರಿತು ಸಾಕಷ್ಟು ಚಿಂತನೆಗಳು ನಡೆಯಬೇಕಾಗಿರುವುದು ಇಂದಿನ ಅಗತ್ಯವಾಗಿದೆ ಎಂದು ಕುವೆಂಪು ವಿಶ್ವವಿದ್ಯಾನಿಲಯದ ವಿಶ್ರಾಂತ ಉಪ ಕುಲಪತಿ ಪ್ರೊ.ಡಾ.ಬಿ.ಎಸ್.ಶೇರಿಗಾರ್ ಹೇಳಿದ್ದಾರೆ.

ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಬುಧ ವಾರ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಒಳಪಟ್ಟ ಖಾಸಗಿ ಕಾಲೇಜು ಆಡಳಿತ ಮಂಡಳಿಗಳ ಸಂಘದ ವಾರ್ಷಿಕ ಸಭೆ ಹಾಗೂ ‘ಉನ್ನತ ಶಿಕ್ಷಣದಲ್ಲಿ ಗುಣಮಟ್ಟದ ವರ್ಧನೆ- ಸರಕಾರ, ವಿಶ್ವವಿದ್ಯಾನಿಲಯ ಹಾಗೂ ಆಡಳಿತ ಮಂಡಳಿಗಳ ಪಾತ್ರ’ ಎಂಬ ವಿಷಯದ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಪ್ರಸ್ತುತ ದೇಶದಲ್ಲಿ ಸುಮಾರು 800 ವಿಶ್ವವಿದ್ಯಾನಿಲಯಗಳಿವೆ. ಕಳೆದ 10-15 ವರ್ಷಗಳಲ್ಲಿ ಇವುಗಳ ಸಂಖ್ಯೆಯಲ್ಲಿ ಮೂರು ಪಟ್ಟು ಹೆಚ್ಚಾಗಿದೆ. 40000 ಕಾಲೇಜುಗಳಲ್ಲಿ 20ಮಿಲಿಯ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುತ್ತಿ ದ್ದಾರೆ. ಈ ಮೂಲಕ ಭಾರತವು ಜಗತ್ತಿನಲ್ಲಿ ಮೂರನೆ ಅತ್ಯಂತ ದೊಡ್ಡ ಶಿಕ್ಷಣ ವ್ಯವಸ್ಥೆಯಾಗಿ ಬೆಳೆದಿದೆ. ಪ್ರಥಮ ಸ್ಥಾನದಲ್ಲಿ ಅಮೆರಿಕಾ, ದ್ವಿತೀಯ ಸ್ಥಾನದಲ್ಲಿ ಚೀನಾ ದೇಶ ಇದೆ ಎಂದರು.

ಉನ್ನತ ಶಿಕ್ಷಣದಲ್ಲಿ ಶೇ.85ರಷ್ಟು ವಿದ್ಯಾರ್ಥಿಗಳು ಬಿಎ, ಬಿಎಸ್ಸಿ, ಬಿಕಾಂ ಹಾಗೂ ಇತರ ಸಾಮಾನ್ಯ ಕೋರ್ಸ್‌ಗಳನ್ನು ಮಾಡುತ್ತಿದ್ದಾರೆ. ಒಟ್ಟು ಕಾಲೇಜಿ ಗಳ ಪೈಕಿ ಹೆಚ್ಚಿನವು ಖಾಸಗಿ ಪಾಲುದಾರಿಕೆಯಲ್ಲಿ ನಡೆಯುತ್ತಿವೆ. ದೇಶದ 100 ಅತ್ಯಂತ ಟಾಪ್ ಕಾಲೇಜುಗಳಲ್ಲಿ ಹೆಚ್ಚಿನವು ಖಾಸಗಿ ಕಾಲೇಜುಗಳಾಗಿವೆ ಎಂದು ಅವರು ತಿಳಿಸಿದರು.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ಪ್ರತಿ ಈಗಾಗಲೇ ಸಿದ್ಧವಾಗಿದ್ದು, ಅದು ಸಂಸತ್ತಿನಲ್ಲಿ ಜಾರಿಯಾಗಿ ನಂತರ ಅನುಷ್ಠಾನಕ್ಕೆ ಬರಬೇಕಾಗಿದೆ. ಅದೇ ರೀತಿ ಕರ್ನಾಟಕ ಶಿಕ್ಷಣ ನೀತಿಯ ಕರಡು ಕೂಡ ಸಿದ್ಧವಾಗಿ ಸರಕಾರಕ್ಕೆ ಒಪ್ಪಿಸ ಲಾಗಿದೆ. ಅದು ಕೂಡ ಅನುಷ್ಠಾನದ ಹಂತದಲ್ಲಿ ಇದೆ ಎಂದು ಅವರು ಹೇಳಿದರು. ಉನ್ನತ ಶಿಕ್ಷಣದ ವ್ಯಾಪ್ತಿ ಈಗ ಬಹಳಷ್ಟು ವಿಸ್ತಾರ ಆಗಿದೆ. ಅವಿಷ್ಕಾರಗಳಿಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಹಾಗಾಗಿ ಕಾಲೇಜುಗಳು ನ್ಯಾಕ್ ಮಾರ್ಗ ದರ್ಶನದಲ್ಲಿ ನೀಡಲಾಗಿರುವ ಮಾನದಂಡಗಳನ್ನು ನಿರಂತರವಾಗಿ ಬಲಪಡಿ ಸುವ ಕೆಲಸ ಮಾಡಬೇಕು. ಶಿಕ್ಷಣ ಸಂಸ್ಥೆಗಳು ಕೇವಲ ಜ್ಞಾನ ನೀಡುವ ಸಂಸ್ಥೆ ಆಗಿರದೆ ಜ್ಞಾನ ಸೃಷ್ಠಿಸುವ ದೇಗುವಗಳಾಗಿ ಪರಿವರ್ತನೆಯಾಗಬೇಕು ಎಂದು ಅವರು ತಿಳಿಸಿದರು.

ಮಣಿಪಾಲ ವಿಶ್ವವಿದ್ಯಾನಿಲಯದ ಪ್ರೊವೈಸ್ ಚಾನ್ಸೆಲರ್ ಡಾ.ಜಿ.ಕೆ.ಪ್ರಭು ದಿಕ್ಸೂಚಿ ಭಾಷಣ ಮಾಡಿ, ಉನ್ನತ ಶಿಕ್ಷಣದಲ್ಲಿ ಗುಣಮಟ್ಟ ಹೆಚ್ಚಿಸುವಲ್ಲಿ ಸರಕಾರ, ವಿಶ್ವವಿದ್ಯಾನಿಲಯ ಹಾಗೂ ಆಡಳಿತ ಮಂಡಳಿಗಳು ಬಹಳಷ್ಟು ಮಹತ್ತರ ಪಾತ್ರವನ್ನು ವಹಿಸುತ್ತದೆ. ಇಂದು ಭಾರತದಲ್ಲಿ ಶೇ.20ರಷ್ಟು ವಿದ್ಯಾರ್ಥಿಗಳು ಮಾತ್ರ ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ಉಳಿದ ಶೇ.80ರಷ್ಟು ವಿದ್ಯಾರ್ಥಿಗಳು ವಿವಿಧ ಕಾರಣಾಗಳಿಂದ ಇದರಿಂದ ದೂರ ಉಳಿದಿದ್ದಾರೆ. ಈ ನಿಟ್ಟಿನಲ್ಲಿ ಸರಕಾರಗಳು ಉನ್ನತ ಶಿಕ್ಷಣಕ್ಕೆ ಬೇಕಾದ ನೀತಿ ನಿಯಮ ಹಾಗೂ ಮೂಲಭೂತ ಸೌಕರ್ಯಗಳಲ್ಲಿ ಹೆಚ್ಚಿನ ಸುಧಾರಣೆ ತರಬೇಕು ಎಂದರು.

ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಡಾ.ಎಚ್.ಶಾಂತರಾಮ್ ವಹಿಸಿದ್ದರು. ಕೋಶಾಧಿಕಾರಿ ಸಿಎ ಎಸ್.ಎಸ್.ಕಾಮತ್ ಉಪಸ್ಥಿತರಿದ್ದರು. ಎಂಜಿಎಂ ಕಾಲೇಜಿನ ಪ್ರಾಂಶುಪಾಲೆ ಪ್ರೊ.ಕುಸುಮಾ ಕಾಮತ್ ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಭಾಸ್ಕರ ಶೆಟ್ಟಿ ವಂದಿಸಿದರು. ಉಪನ್ಯಾಸಕ ಸುಚಿತ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X