Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಪುನೀತ ಯಾತ್ರೆ’ಗೆ ಸಿಎಂ ಸಿದ್ದರಾಮಯ್ಯ...

‘ಪುನೀತ ಯಾತ್ರೆ’ಗೆ ಸಿಎಂ ಸಿದ್ದರಾಮಯ್ಯ ಚಾಲನೆ

ವಾರ್ತಾಭಾರತಿವಾರ್ತಾಭಾರತಿ27 Sept 2017 8:03 PM IST
share
‘ಪುನೀತ ಯಾತ್ರೆ’ಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು, ಸೆ.27: ರಾಜ್ಯ ಮತ್ತು ಹೊರ ರಾಜ್ಯಗಳ ಪ್ರಮುಖ ಧಾರ್ಮಿಕ, ಐತಿಹಾಸಿಕ, ಪಾರಂಪರಿಕ ಸ್ಥಳಗಳಿಗೆ ರಿಯಾಯಿತಿ ದರದಲ್ಲಿ ಎಲ್ಲ ಧರ್ಮದ ಪ್ರವಾಸಿಗರನ್ನು ಕರೆದೊಯ್ಯುವ ಪುನೀತಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಚಾಲನೆ ನೀಡಿದರು.

ರಾಜ್ಯ ಪ್ರವಾಸೋದ್ಯಮ ಇಲಾಖೆ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಸಹಭಾಗಿತ್ವದಲ್ಲಿ ರೂಪಿಸಿರುವ ಪುನೀತ ಯಾತ್ರೆಗೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಯಾತ್ರಾರ್ಥಿಗಳಿಗೆ ಶುಭಕೋರಿ, ಈ ಹೊಸ ಯೋಜನೆ ಯಶಸ್ವಿಯಾಗಲಿ, ಎಲ್ಲರೂ ಸದುಪಯೋಗಪಡಿಸಿಕೊಳ್ಳಲಿ ಎಂದು ಹಾರೈಸಿದರು.

ಪ್ರವಾಸವನ್ನು ಎರಡು ಹಂತದಲ್ಲಿ ಆಯೋಜಿಸಲಾಗುವುದು. ಒಟ್ಟು 1.38 ಲಕ್ಷ ಮಂದಿ ಇದರ ಲಾಭ ಪಡೆಯುವ ನಿರೀಕ್ಷೆ ಇದೆ. ಮೊದಲ ಹಂತದಲ್ಲಿ ಇಂದಿನಿಂದಲೇ ಹೊಯ್ಸಳ, ಗೊಮ್ಮಟೇಶ್ವರ ದರ್ಶನ, ಉತ್ತರ ಕರ್ನಾಟಕ, ಭಾರತದ ವಿಸ್ಮಯ ಕ್ಷೇತ್ರಗಳ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇದಲ್ಲದೆ, ತಿರುಪತಿ, ಕಾಳಹಸ್ತಿ, ಮಂತ್ರಾಲಯ ಮತ್ತು ಶಿರಡಿಯನ್ನು ಪ್ಯಾಕೇಜ್ ಒಳಗೊಂಡಿದೆ ಎಂದು ತಿಳಿಸಿದರು.

ಅಕ್ಟೋಬರ್ 15ರಿಂದ ಎರಡನೆ ಹಂತದ ಯಾತ್ರೆ ಆರಂಭವಾಗಲಿದೆ. ಇದರಲ್ಲಿ ರಾಜ್ಯದ ಇತಿಹಾಸ ಪ್ರಸಿದ್ಧ ಚರ್ಚ್. ಮಸೀದಿಗಳ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇದಲ್ಲದೆ, ಗಾಣಗಾಪುರ, ದತ್ತಾತ್ರೇಯ ಮಳಖೇಡ ರಾಘವೇಂದ್ರ, ಸನ್ನತಿ ಚಂದ್ರ ಲಾಂಬಮ, ಸವದತ್ತಿ ಎಲ್ಲಮ್ಮ, ಶರಣ ಬಸವರ ಪವಿತ್ರ ಸ್ಥಳಗಳ ದರ್ಶನ ಇರಲಿದೆ ಎಂದು ಹೇಳಿದರು.

ನಂಜನಗೂಡು, ಬಾಬಾ ಬುಡನ್‌ ಗಿರಿ, ಆದಿಚುಂಚನಗಿರಿ, ಗೋಕರ್ಣ, ಶಿರಸಿ ಮಾರಿಕಾಂಬೆ, ಶಿರಡಿ, ಶಬರಿಮಲೆ, ಮಧುರೆಗೆ ಪ್ರವಾಸಿಗರನ್ನು ಕರೆದೊಯ್ಯಲಾಗುವುದು. ರಾಜ್ಯದ ಜನತೆಗೆ ಸರಕಾರ ನೀಡುತ್ತಿರುವ ದಸರಾ ಕೊಡುಗೆ ಇದಾಗಿದೆ ಎಂದರು.

ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಇನ್ನಿತರರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X