ವಿವಾದದಿಂದ ದೂರ ಉಳಿದ ಕೇಂದ್ರ ಸರಕಾರ
ನ್ಯಾಯಮೂರ್ತಿ ಜಯಂತ್ ಪಟೇಲ್ ರಾಜೀನಾಮೆ

ಹೊಸದಿಲ್ಲಿ, ಸೆ. 26: ಗುಜರಾತ್‌ನಲ್ಲಿ ಇಶ್ರತ್ ಜಹಾನ್‌ನ ನಕಲಿ ಎನ್‌ಕೌಂಟರ್ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಿದ ಕರ್ನಾಟಕ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯಮೂರ್ತಿ ಜಯಂತ್ ಪಟೇಲ್ ರಾಜೀಮೆಯಿಂದ ಉಂಟಾದ ವಿವಾದದಿಂದ ದೂರ ಉಳಿಯಲು ಕೇಂದ್ರ ಸರಕಾರ ನಿರ್ಧರಿಸಿದೆ. ಅವರ ವರ್ಗಾವಣೆ ಕುರಿತಾದ ಯಾವುದೇ ಪ್ರಸ್ತಾಪವನ್ನು ನಾವು ಸ್ವೀಕರಿಸಿಲ್ಲ ಎಂದು ಕೇಂದ್ರ ಕಾನೂನು ಸಚಿವ ರವಿ ಶಂಕರ್ ಪ್ರಸಾದ್ ಸಂಪುಟ ಸಭೆ ಬಳಿಕ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಈ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೆಯೊಂದಕ್ಕೆ ಅವರು ಈ ಪ್ರತಿಕ್ರಿಯೆ ನೀಡಿದರು. ಮುಖ್ಯ ನ್ಯಾಯಮೂರ್ತಿ ಸ್ಥಾನ ನೀಡದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಪಟೇಲ್ ಅವರು ಸೋಮವಾರ ರಾಜೀನಾಮೆ ನೀಡಿದ್ದರು.
Next Story





