ಮಾದಕ ವಸ್ತುಗಳ ದುಷ್ಪರಿಣಾಮಗಳ ಅರಿವು ಕಾರ್ಯಕ್ರಮ
ಉಡುಪಿ, ಸೆ.28: ಉಡುಪಿ ನಗರ ಪೊಲೀಸ್ ಠಾಣೆ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮವು ಗುರುವಾರ ಉಡುಪಿ ಪಿಪಿಸಿ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.
ಮುಖ್ಯ ಅತಿಥಿಯಾಗಿ ಆಗಮಿಸಿದ ಮನೋ ತಜ್ಞ ಡಾ.ಪಿ.ವಿ.ಭಂಡಾರಿ, ಡಿಸಿಐಬಿ ಪೊಲೀಸ್ ನಿರೀಕ್ಷಕ ಸಂಪತ್ ಕುಮಾರ್, ಉಡುಪಿ ನಗರ ಠಾಣೆ ಉಪನಿರೀಕ್ಷಕ ಅನಂತಪದ್ಮನಾಭ ಕೆ.ವಿ. ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಹಾಗೂ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಜಗದೀಶ್ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಮಾರು 250ಕ್ಕೂ ಅಧಿಕ ವಿದ್ಯಾರ್ಥಿ ಗಳು ಭಾಗವಹಿಸಿದ್ದರು.
Next Story





