Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಣಾಜೆ ಗಟ್ಟಿಮೂಲೆ ಮೇಲ್ಮನೆಯಲ್ಲಿ...

ಕೊಣಾಜೆ ಗಟ್ಟಿಮೂಲೆ ಮೇಲ್ಮನೆಯಲ್ಲಿ ವಿದ್ಯಾರ್ಥಿಗಳ ನಡಿಗೆ ರೈತರ ಹಡಿಲು ಭೂಮಿಯ ಕಡೆಗೆ

ವಾರ್ತಾಭಾರತಿವಾರ್ತಾಭಾರತಿ28 Sept 2017 10:14 PM IST
share
ಕೊಣಾಜೆ ಗಟ್ಟಿಮೂಲೆ ಮೇಲ್ಮನೆಯಲ್ಲಿ ವಿದ್ಯಾರ್ಥಿಗಳ ನಡಿಗೆ ರೈತರ ಹಡಿಲು ಭೂಮಿಯ ಕಡೆಗೆ

ಕೊಣಾಜೆ, ಸೆ. 28: ಇಂದಿನ ಆಧುನಿಕತೆಯಲ್ಲಿ ಭತ್ತದ ಗದ್ದೆಗಳು ಹಡೀಲು ಬೀಳುತ್ತಿವೆ. ಯುವ ಜನಾಂಗ ಕೂಡಾ ಕೃಷಿಯಿಂದ ದೂರವಾಗುತ್ತಿದೆ. ಯುವ ಸಮುದಾಯದಲ್ಲಿ ಕೃಷಿಯ ಆಸಕ್ತಿಯನ್ನು ಬೆಳೆಸುವ ಉದ್ದೇಶದೊಂದಿಗೆ ಕೊಣಾಜೆಯ ಹಡೀಲು ಬಿದ್ದ ಗದ್ದೆಯಲ್ಲಿ ನಗರದ ಕಾಲೇಜೊಂದರ ವಿದ್ಯಾರ್ಥಿಗಳು ಜೊತೆಗೆ ವಿವಿಧ ಸಂಘಟನೆಗಳು ಗದ್ದೆಗಿಳಿದು ಕೃಷಿಯ ಕಾಯಕದಲ್ಲಿ ತೊಡಗಿಸಿಕೊಂಡಿದೆ.

ಕಳೆದ ವಾರ ಗದ್ದೆಗಿಳಿದಿದ್ದ ಸಚಿವರು ಗುರುವಾರ ಕೂಡಾ ಗದ್ದೆಗಿಳಿದು ವಿದ್ಯಾರ್ಥಿಗಳೊಂದಿಗೆ ಸೇರಿಕೊಂಡರು ಜೊತೆಗೆ ಟಿಲ್ಲರ್ ಕೂಡಾ ಚಲಾಯಿಸಿ ವಿದ್ಯಾರ್ಥಿಗಳಿಗೆ ಉತ್ಸಾಹ ತುಂಬಿದರು.

ಇದು ಡಾ.ಪಿ. ದಯಾನಂದ ಪೈ, ಪಿ.ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು ರಥಬೀದಿ, ರಾಷ್ಟ್ರೀಯ ಸೇವಾ ಯೋಜನೆ ಘಟಕಗಳು, ರೆಡ್ ರಿಬ್ಬನ್, ಕೊಣಾಜೆ ಗ್ರಾಮ ಪಂಚಾಯತ್, ರೈತ ಸಂಘ ಹಸಿರುಸೇನೆ , ಮಾಧ್ಯಮ ಕೇಂದ್ರ ತೊಕ್ಕೊಟ್ಟು ಹಾಗೂ ಮಂಗಳೂರು ವಿ.ವಿಯ ಅಂತರಾಷ್ಟ್ರೀಯ ವಿದ್ಯಾರ್ಥಿ ಕೇಂದ್ರ ಮಂಗಳಗಂಗೋತ್ರಿ ಇವುಗಳ ಜಂಟಿ ಆಶ್ರಯದಲ್ಲಿ ಕೊಣಾಜೆ ಗಟ್ಟಿಮೂಲೆ ಮೇಲ್ಮನೆಯಲ್ಲಿ ವಿದ್ಯಾರ್ಥಿಗಳ ನಡಿಗೆ ರೈತರ ಹಡಿಲು ಭೂಮಿಯ ಕಡೆಗೆ ಇದರ ಅಂಗವಾಗಿ ಕೃಷಿ ಸಂವಾದ ಮುಂಗಾರಿನ ನಾಟಿಯ ಅಂತಿಮ ಸುತ್ತಿನ ಕಾರ್ಯಕ್ರಮದಲ್ಲಿ ಸಚಿವರ ವಿವಿಧ ಚಟುವಟಿಕೆಗಳು ರೈತರಿಗೆ ಪ್ರೋತ್ಸಾಹ ನೀಡಿತು.

ಕೊಣಾಜೆ ಎರಡನೇ ವಾರ್ಡನ್ನು ದತ್ತು ಪಡೆದ ಕಾಲೇಜು ವಿದ್ಯಾರ್ಥಿಗಳು ಪರಿಸರಕ್ಕೆ ಪೂರಕವಾದ ಅನೇಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಒಂದು ತಿಂಗಳ ಅವಧಿಯಲ್ಲಿ ಪ್ರತಿ ಶನಿವಾರದಂದು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೆಡ್ ರಿಬ್ಬನ್‌ಗೆ ಸೇರಿದ ವಿದ್ಯಾರ್ಥಿಗಳು ಗಿಡ ನೆಡುವುದು, ಹಡಿಲು ಬಿದ್ದ ಗದ್ದೆಯಲ್ಲಿ ನಾಟಿ ಕಾರ್ಯದಲ್ಲಿ ತೊಡಗಿಸಿಕೊಳ್ಳವುದು ಮಾಡುತ್ತಲೇ ಬಂದಿದ್ದಾರೆ.

ಗುರುವಾರ ಕೂಡ ನಾಟಿ ಕಾರ್ಯದಲ್ಲಿ ತೊಡಗಿಸಿಕೊಂಡ ವಿದ್ಯಾರ್ಥಿಗಳ ಜತೆಗೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಭಾಗವಹಿಸಿದ್ದರಲ್ಲದೆ, ಮಂಗಳೂರು ವಿ.ವಿ ಅಧ್ಯಯನದ ವಿದೇಶಿ ವಿದ್ಯಾರ್ಥಿಗಳಿಗೆ ನಾಟಿ ಕಾರ್ಯ ಮಾಡುವುದರ ಕುರಿತು ಅಂಗ್ಲ ಭಾಷೆಯಲ್ಲಿ ಮಾಹಿತಿ ನೀಡಿದರು.

ಅವರ ಜತೆಗೆ ನಾಟಿ ಕಾರ್ಯವನ್ನು ನಡೆಸಿದರು. ಈ ನಡುವೆ ಒಂದೂವರೆ ಎಕರೆಯ ಗದ್ದೆಯಲ್ಲಿ ಅರ್ಧ ಎಕರೆಯಲ್ಲಿ ಟಿಲ್ಲರ್ ಮೂಲಕ ಅರ್ಧ ಗಂಟೆಯ ಕಾಲ ಉಳುಮೆ ನಡೆಸಿ ನೆರೆದವರನ್ನು ಆಶ್ಚರ್ಯ ಚಕಿತರನ್ನಾಗಿಸಿದರು. ಅಷ್ಟಕ್ಕೇ ಸುಸ್ತಾಗದ ಸಚಿವರು ಧರಿಸಿದ್ದ ಬಿಳಿ ಬಟ್ಟೆಯನ್ನು ಲೆಕ್ಕಿಸದೆ ಗದ್ದೆಯಲ್ಲಿ ವಿದ್ಯಾರ್ಥಿಗಳ ಜತೆಗೆ ಓಟಕ್ಕೆ ನಿಂತು ವಿದ್ಯಾರ್ಥಿಗಳನ್ನು ಓಟದಲ್ಲಿ ಮೀರಿಸುವಲ್ಲಿ ಯಶಸ್ವಿಯಾದರು. ಓಡುವ ರಭಸದಲ್ಲಿ ಗದ್ದೆಯಲ್ಲಿ ಉರುಳಿಬಿದ್ದ ಸಚಿವರ ಮೇಲೆ ವಿದ್ಯಾರ್ಥಿಗಳು ಬಿದ್ದರಲ್ಲದೆ, ಮಕ್ಕಳ ಜತೆಗೆ ಮಕ್ಕಳಾಗಿಯೇ ಸಚಿವರು ಕಂಡುಬಂದರು.

ರೈತರಿಗೆ ಪ್ರೋತ್ಸಾಹ ನೀಡುವಂತಹ ಕಾರ್ಯ ನಡೆದಿದೆ. ರಾಜ್ಯಾದ್ಯಂತ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಕೃಷಿಭೂಮಿಯಲ್ಲಿ ತೊಡಗಿಸಿಕೊಳ್ಳುವುದರ ಕುರಿತು ಸರಕಾರದ ಗಮನ ಸೆಳೆಯುತ್ತೇನೆ. ಇದರಿಂದ ಕೃಷಿಕರಿಗೆ ಪ್ರೋತ್ಸಾಹ ದೊರೆಯುವುದಲ್ಲದೆ, ಹಡಿಲು ಬಿದ್ದ ಗದ್ದೆಗಳಲ್ಲಿ ಪುನಶ್ಚೇತನ ಕಾಣುವುದರೊಂದಿಗೆ ಪರಿಸರಕ್ಕೆ ಪೂರಕವಾದ ವಾತಾವರಣ ನಿರ್ಮಾಣವಾಗಲು ಸಾಧ್ಯವಾಗುವುದು ಎಂದು ಸಚಿವರು ತಿಳಿಸಿದರು.

ಗದ್ದೆಯಲ್ಲಿ ನಡೆದ ಕಾರ್ಯಕ್ರಮವನ್ನು ಮಂಗಳೂರು ವಿ.ವಿ ಕುಲಪತಿ ಪ್ರೊ.ಕೆ.ಭೈರಪ್ಪ ಉದ್ಘಾಟಿಸಿದರು. ಡಾ.ಪಿ. ದಯಾನಂದ ಪೈ, ಪಿ.ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು ರಥಬೀದಿ ಇದರ ಪ್ರಾಂಶುಪಾಲ ಪ್ರೊ.ರಾಜಶೇಖರ್ ಹೆಬ್ಬಾರ್.ಸಿ, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಪ್ರೊ. ಉದಯಶಂಕರ್ .ಹೆಚ್, ಮಂಗಳೂರು ವಿ.ವಿಯ ಅಂತರಾಷ್ಟ್ರೀಯ ವಿದ್ಯಾರ್ಥಿ ಕೇಂದ್ರ ಮಂಗಳಗಂಗೋತ್ರಿ ಡಾ.ರವಿಶಂಕರ್ ರಾವ್, ಕೊಣಾಜೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಮುಸ್ತಾಫ ಹರೇಕಳ, ರೈತ ಸಂಘ ಹಸಿರುಸೇನೆಯ ಮನೋಹರ ಶೆಟ್ಟಿ ನಡಿಕಂಬಳ ಗುತ್ತು, ಮಂಗಳೂರು ವಿ.ವಿ ಕುಲಸಚಿವ ಡಾ.ಕೆ.ಎಂ ಲೋಕೇಶ್, ರಥಬೀದಿ ಕಾಲೇಜಿನ  ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿಗಳಾದ ಡಾ.ನವೀನ್ ಎನ್ ಕೊಣಾಜೆ, ಪ್ರೊ. ಜೆಫ್ರಿ ರೋಡ್ರಿಗಸ್ ಹಾಗೂ ಡಾ.ನಾಗವೇಣಿ ಮಂಚಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X