ಜನಪರ ಯೋಜನೆಗಳು ಜನರಿಗೆ ತಲುಪಬೇಕು: ಎಸ್ಪಿ ರಾಜೇಂದ್ರಪ್ರಸಾದ್

ಮಡಿಕೇರಿ, ಸೆ.28: ನಗರದ ಗಾಂಧಿ ಮೈದಾನದಲ್ಲಿ ಮಡಿಕೇರಿ ದಸರಾ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸರ್ಕಾರದ ಹಲವು ಜನಪರ ಯೋಜನೆ ಒಳಗೊಂಡ ‘ಮಾಹಿತಿ ಮಳಿಗೆ’ಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಗುರುವಾರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಸರ್ಕಾರದ ಕಾರ್ಯಕ್ರಮಗಳಸಿನ್ನಷ್ಟು ಪರಿಣಾಮಕಾರಿಯಾಗಿ ತಲುಪಿಸುವ ನಿಟ್ಟಿನಲ್ಲಿ ಇಂತಹ ಮಾಹಿತಿ ಮಳಿಗೆ ಅಗತ್ಯ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಸರ್ಕಾರದ ಜನಪರ ಯೋಜನೆಗಳಾದ ಅನ್ನಭಾಗ್ಯ, ಕ್ಷೀರ ಭಾಗ್ಯ, ಕೃಷಿ ಭಾಗ್ಯ, ಪಶುಭಾಗ್ಯ, ರಾಜೀವ್ ಆರೋಗ್ಯ ಭಾಗ್ಯ, ಮನಸ್ವಿನಿ, ಮೈತ್ರಿ, ವಿದ್ಯಾಸಿರಿ, ಸಾಲಮನ್ನಾ, ಕೌಶಲ್ಯ ತರಬೇತಿ, ಸಣ್ಣ ನೀರಾವರಿಗೆ ಉತ್ತೇಜನ ಹೀಗೆ ಹತ್ತು ಹಲವು ಯೋಜನೆಗಳನ್ನು ಮಾಹಿತಿ ಮಳಿಗೆ ಒಳಗೊಂಡಿದೆ ಎಂದರು.
ವಾರ್ತಾಧಿಕಾರಿ ಚಿನ್ನಸ್ವಾಮಿ ಸರ್ಕಾರದ ಜನಪರ ಹಾಗೂ ಜನಪ್ರಿಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಮಡಿಕೇರಿ ನಗರ ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಚುಮ್ಮಿದೇವಯ್ಯ ಹಾಜರಿದ್ದರು.







