ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ಘೋಷಣೆ

ಮುಂಬೈ, ಸೆ.29: ಎಲ್ಫಿನ್ ಸ್ಟನ್ ರೈಲ್ವೇ ನಿಲ್ದಾಣದ ಪಾದಚಾರಿ ಮೇಲ್ಸೇತುವೆಯಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಕಾಲ್ತುಳಿತದಿಂದ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿದ್ದು, ಮೃತಪಟ್ಟವರ ಕುಟುಂಬಕ್ಕೆ ಮಹಾರಾಷ್ಟ್ರ ಸರಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದೆ.
ಈ ದುರ್ಘಟನೆಯಲ್ಲಿ 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಅವರನ್ನು ಕೆಇಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರಕಾರ ಭರಿಸಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್ ತಿಳಿಸಿದ್ದಾರೆ. ಮೃತಪಟ್ಟ 22 ಮಂದಿಯ ಪೈಕಿ 19 ಮಂದಿಯ ಗುರುತು ಪತ್ತೆಯಾಗಿದೆ.
ಘಟನೆಯ ಬಗ್ಗೆ ಕೇಂದ್ರ ರೈಲ್ವೇ ಸಚಿವಾಲಯ ಮತ್ತು ಮಹಾರಾಷ್ಟ್ರ ಸರಕಾರ ತನಿಖೆಗೆ ಆದೇಶ ನೀಡಿದೆ.
Next Story





