ಪುತ್ತೂರು: ಕೆಎಸ್ಸಾರ್ಟಿಸಿ ಬಸ್ ಗೆ ಕಲ್ಲೆಸೆತ

ಪುತ್ತೂರು, ಸೆ. 29: ಕೆಎಸ್ಸಾರ್ಟಿಸಿ ಬಸ್ ಒಂದಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಕಲ್ಲೆಸೆದ ಘಟನೆ ಇಲ್ಲಿನ ಬೊಳುವಾರಿನಲ್ಲಿ ನಡೆದಿದೆ. ವಿಟ್ಲದಿಂದ ಪುತ್ತೂರಿಗೆ ಬರುತ್ತಿದ್ದ ಬಸ್ ಗೆ ಅಪರಿಚಿತ ವ್ಯಕ್ತಿಯೋರ್ವ ಕೆಎಸ್ಸಾರ್ಟಿಸಿ ಬಸ್ಸಿಗೆ ಕಲ್ಲೆಸೆದಿದ್ದು, ಗಾಜು ಪುಡಿಯಾಗಿದೆ. ದುಷ್ಕರ್ಮಿ ತನ್ನ ಬೈಕ್ ಅನ್ನು ದೂರದಲ್ಲಿ ನಿಲ್ಲಿಸಿ ಕೆಎಸ್ಸಾರ್ಟಿಸಿ ಬಸ್ ಗೆ ಕಲ್ಲೆಸೆದು ನಂತರ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆತನ ಪತ್ತೆಗಾಗಿ ಶೋಧ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





