Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಾಡಹಬ್ಬ ದಸರಾ ಪ್ರಯುಕ್ತ ರಾಜ್ಯದ ಜನತೆಗೆ...

ನಾಡಹಬ್ಬ ದಸರಾ ಪ್ರಯುಕ್ತ ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಶುಭ ಹಾರೈಕೆ

ವಾರ್ತಾಭಾರತಿವಾರ್ತಾಭಾರತಿ29 Sept 2017 5:48 PM IST
share
ನಾಡಹಬ್ಬ ದಸರಾ ಪ್ರಯುಕ್ತ ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಶುಭ ಹಾರೈಕೆ

ಬೆಂಗಳೂರು, ಸೆ.29: ನಾಡಹಬ್ಬ ದಸರಾ ಪ್ರಯುಕ್ತ ರಾಜ್ಯದ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ.

ನವರಾತ್ರಿಯ ಹೆಸರಿನಲ್ಲಿ ನಡೆಯುವ ಹತ್ತು-ದಿನಗಳ ಸಂಭ್ರಮದ ಅಂತಿಮ ಘಟ್ಟದಲ್ಲಿ ನಾವಿದ್ದೇವೆ. ಯುದ್ಧಕ್ಕೆ ತೆರಳುವ ಮುನ್ನ ಮಹಾ ನವಮಿಯ ದಿನ ಪಾಂಡವರು ಆಯುಧಗಳನ್ನು ಪೂಜಿಸಿದರು ಎಂಬ ಉಲ್ಲೇಖ ಮಹಾಭಾರತದಲ್ಲಿದೆ. ಬಳಿಕ, ಇದು ರಾಜ-ಮಹಾರಾಜರ ಕಾಲದಲ್ಲಿ ಆಯುಧಗಳಿಗೆ ಪೂಜೆ ಸಲ್ಲಿಸುವ ಸಂಪ್ರದಾಯವಾಗಿ ಬೆಳೆಯಿತು.

ಇದೀಗ ಕಾಲ ಬದಲಾದಂತೆ ಆಯುಧ ಪೂಜೆಯು ಶುಭದಿನವಾಗಿ ಶಸ್ತ್ರಾಸ್ತ್ರಗಳ ಬದಲಿಗೆ ನಮಗೆ ಬದುಕು ಕಟ್ಟಿ ಕೊಡುವ ಎಲ್ಲಾ ಉಪಕರಣಗಳನ್ನು, ಪರಿಕರಗಳನ್ನು ಹಾಗೂ ವಸ್ತುಗಳನ್ನು ಶುಚಿಗೊಳಿಸಿ ಪೂಜೆ ಸಲ್ಲಿಸುವ ಪದ್ಧತಿ ಹಾಗೂ ಪರಿಪಾಠ ಪ್ರಾರಂಭವಾಗಿದೆ.
ಶುಭ ಕಾರ್ಯಗಳನ್ನು ಪ್ರಾರಂಭಿಸುವ ಮುನ್ನ ಮುಹೂರ್ತಗಳನ್ನು ನೋಡುವ ನಂಬಿಕೆ ಹಲವರಲ್ಲಿದೆ. ಆದರೆ, ವಿಜಯ ದಶಮಿಯ ದಿನ ಇದಕ್ಕೆ ವಿನಾಯಿತಿ ಇದೆ. ಮಕ್ಕಳ ಅಕ್ಷರಾಭ್ಯಾಸವಾಗಲೀ, ಕಟ್ಟಡಗಳ ಶಿಲಾನ್ಯಾಸವಾಗಲೀ, ನೂತನ ಮನೆಗಳ ಗೃಹ ಪ್ರವೇಶಕ್ಕಾಗಲೀ, ವ್ಯಾಪಾರ-ವಹಿವಾಟಿನ ಶುಭಾರಂಭಕ್ಕಾಗಲಿ ವಿಜಯ ದಶಮಿಯ ದಿನ ಸರ್ವಶ್ರೇಷ್ಠ ಎಂಬುದು ಬಹುಜನರ ವಿಶ್ವಾಸ.

ಈ ಎರಡೂ ಪ್ರಮುಖ ಹಬ್ಬಗಳ ಸುಸಂರ್ಭದಲ್ಲಿ ರಾಜ್ಯದ ಜನತೆಯಲ್ಲಿ ನನ್ನ ಮನವಿ ಒಂದೆ. ನಮ್ಮಲ್ಲಿ ಮೂಲ ನಂಬಿಕೆಗಳಿರಲಿ, ಮೂಢ ನಂಬಿಕೆಗಳು ಬೇಡ. ಉತ್ತಮ ಭವಿಷ್ಯಕ್ಕೆ ಶಿಕ್ಷಣವೇ ಅಸ್ತ್ರ, ಉತ್ತಮ ಶಿಕ್ಷಣ ಪಡೆದವರಿಗೆ ಪ್ರತಿ ದಿನವೂ ವಿಜಯವೇ, ಈ ಹಿನ್ನೆಲೆಯಲ್ಲಿ ಎಲ್ಲ ಮಕ್ಕಳಿಗೂ, ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳಿಗೆ, ಶಿಕ್ಷಣ ಕೊಡಿಸಿ, ಸುಶಿಕ್ಷಿತರನ್ನಾಗಿ ರೂಪಿಸಿ. ಇದೇ ತಮ್ಮಲ್ಲಿ ನನ್ನ ಕಳಕಳಿಯ ಮನವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಂದೇಶದಲ್ಲಿ ಕೋರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X