ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಸೆ.29: ರಾಜ್ಯ ಸರಕಾರವು 7 ಮಂದಿ ಐಎಎಸ್ ಹಾಗೂ ಓರ್ವ ಕೆಎಎಸ್ ಅಧಿಕಾರಿಯನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ-ಡಾ.ಪಿ.ಸಿ.ಜಾಫರ್, ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ- ಅನ್ಬುಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತ- ಡಾ.ಎನ್.ವಿ. ಪ್ರಸಾದ್,ರಾಜ್ಯ ನಗರ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮ (ಕೆಯುಐಡಿಎಫ್‌ಸಿ)ದ ವ್ಯವಸ್ಥಾಪಕ ನಿರ್ದೇಶಕ-ಎ.ಬಿ.ಇಬ್ರಾಹೀಂರನ್ನು ವರ್ಗಾವಣೆ ಮಾಡಲಾಗಿದೆ.
ಸರ್ವ ಶಿಕ್ಷಣ ಅಭಿಯಾನದ ರಾಜ್ಯ ಯೋಜನಾ ನಿರ್ದೇಶಕ-ಡಾ.ಎಂ.ಟಿ.ರೆಜು, ರಾಜ್ಯ ವಸತಿ ಮಂಡಳಿಯ ಆಯುಕ್ತ-ಜಿ.ಎನ್.ಶಿವಮೂರ್ತಿ, ಕಂದಾಯ ಇಲಾಖೆ(ವಿಪತ್ತು ನಿರ್ವಹಣೆ, ಭೂಮಿ ಹಾಗೂ ಯುಪಿಎಆರ್) ಕಾರ್ಯದರ್ಶಿ-ಮನೀಶ್ ಮೌದ್ಗಿಲ್ ರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಕೆಎಎಸ್: ರಾಜ್ಯ ಗೃಹ ಮಂಡಳಿಯ ಕಾರ್ಯದರ್ಶಿಯಾಗಿದ್ದ ರಾಜೇಶ್‌ಗೌಡರನ್ನು ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಕೃಷಿ ಮಾರುಕಟ್ಟೆ ಇಲಾಖೆಯ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.





