ಅ. 1, 2: ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಸಮಿತಿ ವತಿಯಿಂದ 4ಜಿ ಕ್ಯಾಂಪ್
 12374568578.jpg)
ಮಂಗಳೂರು, ಸೆ. 29: ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಸಮಿತಿ ವತಿಯಿಂದ ಯುನಿಟ್ ಸಬಲೀಕರಣ ಮಾಡುವ ನಿಟ್ಟಿನಲ್ಲಿ ನಿಗದಿತ ಯೂನಿಟ್ ನಾಯಕರಿಗೆ 4ಜಿ ಕ್ಯಾಂಪ್ ಅ. 1 ಸಂಜೆ 3 ಗಂಟೆಯಿಂದ ಅ. 2ರ ಸಂಜೆ 3 ಗಂಟೆಯ ತನಕ ಮಲ್ಜಾ ವಿದ್ಯಾ ಸಂಸ್ಥೆ ಉಜಿರೆಯಲ್ಲಿ ಎಸ್ಸೆಸ್ಸೆಫ್ ದ.ಕ. ಜಿಲ್ಲಾಧ್ಯಕ್ಷ ಕೆ.ಪಿ. ಸಿರಾಜುದ್ದೀನ್ ಸಖಾಫಿ ಕನ್ಯಾನ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಅ.1ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಉದ್ಘಾಟನಾ ಸಮಾರಂಭವನ್ನು ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯಾಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ ಉದ್ಘಾಟಿಸಲಿದ್ದಾರೆ. ನಂತರ ನಡೆಯಲಿರುವ ವಿವಿಧ ವಿಷಯಗಳಲ್ಲಿ ಪೇರೋಡ್ ಅಬ್ದುರಹ್ಮಾನ್ ಸಖಾಫಿ, ಅಬ್ದುಸ್ಸಲಾಂ ಮುಸ್ಲಿಯಾರ್ ದೇವರ್ ಶೋಲ, ಡಾ. ಹುಸೈನ್ ಸಖಾಫಿ ಚುಳ್ಳಿಕ್ಕೋಡ್, ಸೈಯದ್ ಸಿ.ಟಿ.ಎಮ್. ಉಮರ್ ಅಸ್ಸಖಾಫಿ ತಂಙಳ್ ಮನ್ಶರ್, ಉಮರ್ ಸಖಾಫಿ ಎಡಪ್ಪಾಲ ತರಗತಿ ನಡೆಸಿಕೊಡಲಿದ್ದಾರೆ.
ಅ.2ರಂದು ಸಂಜೆ 3 ಗಂಟೆಗೆ ನಡೆಯುವ ಸಮಾರೋಪ ಸಮಾರಂಭವನ್ನು ಶೈಖುನಾ ಖಾಝಿ ಬೇಕಲ್ ಉಸ್ತಾದ್ ಉದ್ಘಾಟಿಸಲಿದ್ದಾರೆ. ಮಲ್ಜಾ ವಿದ್ಯಾ ಸಂಸ್ಥೆಯ ಸೈಯ್ಯದ್ ಜಲಾಲುದ್ದೀನ್ ತಂಙಳ್ ಉಜಿರೆ ದುಆ: ನೆರವೇರಿಸುವರು.
ಕಾರ್ಯಕ್ರಮದಲ್ಲಿ ರಫೀಕ್ ಸಅದಿ ಬಾಕಿಮಾರ್ ಸಮರೋಪ ಭಾಷಣ ಮಾಡಲಿದ್ದಾರೆ. ವಿಶೇಷ ಅತಿಥಿಗಳಾಗಿ ಎಸ್.ಪಿ ಹಂಝ ಸಖಾಫಿ ಬಂಟ್ವಾಳ, ಅಬ್ದುಲ್ ರಶೀದ್ ಝೈನಿ ಕಾಮಿಲ್ ಸಖಾಫಿ, ಕೆ.ಎಂ ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ, ಜಿ ಎಂ. ಮಹಮ್ಮದ್ ಕಾಮಿಲ್ ಸಖಾಫಿ, ಡಿ.ಕೆ. ಉಮರ್ ಸಖಾಫಿ ಕಂಬಳಬೆಟ್ಟು, ಅಶ್ರಫ್ ಸಅದಿ ಮಲ್ಲೂರು, ಎಸ್ಸೆಸ್ಸೆಫ್ ಜಿಲ್ಲಾ ಉಸ್ತುವಾರಿ ಶರೀಫ್ ಮಾಸ್ಟರ್ ಬೆಂಗಳೂರು, ಕೆ.ಕೆ. ಕಾಮಿಲ್ ಸಖಾಫಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಲಂದರ್ ಪದ್ಮುಂಜ ಪ್ರಕಟನೆಯಲ್ಲಿ ತಿಳಿಸಿದ್ದಾರೆ.







