Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಗದೀಶ್ ಕಾರಂತ ಬಂಧನ ವಿರೋಧಿಸಿ ಬಿಜೆಪಿ -...

ಜಗದೀಶ್ ಕಾರಂತ ಬಂಧನ ವಿರೋಧಿಸಿ ಬಿಜೆಪಿ - ಸಂಘಪರಿವಾರದಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ29 Sept 2017 8:51 PM IST
share
ಜಗದೀಶ್ ಕಾರಂತ ಬಂಧನ ವಿರೋಧಿಸಿ ಬಿಜೆಪಿ - ಸಂಘಪರಿವಾರದಿಂದ ಪ್ರತಿಭಟನೆ

ಪುತ್ತೂರು, ಸೆ. 29: ಪುತ್ತೂರಿನಲ್ಲಿ ಕೋಮು ಪ್ರಚೋದನಾತ್ಮಕವಾಗಿ ಮಾತನಾಡಿದ ಜಗದೀಶ್ ಕಾರಂತ ಬಂಧನವನ್ನು ವಿರೋಧಿಸಿ ಪುತ್ತೂರಿನ ಬಸ್ ನಿಲ್ದಾಣದಲ್ಲಿ ಇಂದು ರಾತ್ರಿ ಬಿಜೆಪಿ ಮತ್ತು ಸಂಘಪರಿವಾರದಿಂದ ಪ್ರತಿಭಟನೆ ನಡೆಯಿತು.

ಈ ಸಂದರ್ಭ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ರಾಜ್ಯ ಕಾರ್ಯದರ್ಶಿ ರಾಧಾ ಕೃಷ್ಣ ಅಡ್ಯಂತಾಯ, ಹಿಂದೂಗಳ ಪವಿತ್ರ ಗ್ರಂಥವಾದ ರಾಮಾಯಣ, ಮಹಾಭಾರತವನ್ನು ನಿಂದನೆ ಮಾಡಿದ ವೈದೇಹಿ, ಭಗವಾನ್ ಅಂತಹವರನ್ನು ಬಂಧಿಸುವ ತಾಕತ್ತಿಲ್ಲದ ಪೊಲೀಸರು ಹಿಂದೂಗಳ ಮತ್ತು ರಾಷ್ಟದ ಮೇಲೆ ಭರವಸೆ ಇಟ್ಟು ಮಾತನಾಡಿದ ಜಗದೀಶ್ ಕಾರಂತರನ್ನು ಬಂಧಿಸಿ ಹಿಂದೂಗಳ ಮೇಲೆ ದಮನ ಕಾರ್ಯ ಮುಂದುವರಿಸಿದ್ದಾರೆ. ಇವರ ಬಂಧನಕ್ಕೆ  ಹೆದರಿ ನಾವು ಹೇಡಿಗಳಂತೆ ಅಡಗಿ ಕೂರುವುದಿಲ್ಲ. ಜಾಗೃತ ಸಮಾಜ ನಿರ್ಮಾಣಕ್ಕೆ ಪ್ರತಿಬದ್ಧರಾಗಿದ್ದೇವೆ ಎಂದರು. ಕಾರಂತರನ್ನು ತಕ್ಷಣವೇ ಬಿಡುಗಡೆ ಮಾಡದಿದ್ದರೆ ರಾಜ್ಯದ್ಯಾಂತ ಪ್ರತಿಭಟನೆ ಮಾಡುವುದಾಗಿ ಅವರು ಎಚ್ಚರಿಸಿದರು.

ಬಜರಂಗದಳದ ಜಿಲ್ಲಾ ಗೋರಕ್ಷಕ್ ಪ್ರಮುಖ್ ಮುರಳಿ ಕೃಷ್ಣ ಹಸಂತಡ್ಕ ಮಾತನಾಡಿ, ಸಮಾಜದ್ರೋಹಿ ಮತ್ತು ನಂಬಿಕೆ ದ್ರೋಹಿ ಕೆಲಸದ ವಿರುದ್ಧ ಹೋರಾಟ ನಡೆಸುವ ಜಗದೀಶ್ ಕಾರಂತರ ಬಂಧಿಸುವ ಮೂಲಕ ಇಲಾಖೆ ಷಂಡತನ ಪ್ರದರ್ಶಿಸಿದೆ. ಓರ್ವ ಕಾರಂತರನ್ನು ಬಂಧಿಸಿದರೆ ಸಾವಿರಾರು ಕಾರ್ಯಕರ್ತರು ಜಗದೀಶ್ ಕಾರಂತರಂತೆ ಅನ್ಯಾಯದ ವಿರುದ್ಧ ಹೋರಾಡಲು ಸಿದ್ಧರಿದ್ದಾರೆ.  ಕಾರಂತರನ್ನು ರಾತ್ರಿಯೇ ಬಿಡುಗಡೆ ಮಾಡದಿದ್ದಾರೆ ಮುಂದೆ ನಡೆಯುವ ಅನಾಹುತಕ್ಕೆ ಸರಕಾರವೇ ಹೊಣೆ ಎಂದರು.

ಈ ಸಂದರ್ಭ ಬಿಜೆಪಿ ಮುಖಂಡರಾದ ಸತ್ಯಜಿತ್ ಸುರತ್ಕಲ್, ಜಿಲ್ಲಾಧ್ಯಕ್ಷ ಸಂಜಿವ ಮಟಂದೂರು, ಮಂಡಲ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಾಧ್ಯಕ್ಷ ಜೀವನ್ ದಜೈನ್, ಸಂಘಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಾಗೂ ಇತರರು ಈ ಸಂದರ್ಭ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X