Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈಲ್ವೆ ಇಲಾಖೆಯೇ ಜನರನ್ನು ಕೊಲ್ಲುವಾಗ,...

ರೈಲ್ವೆ ಇಲಾಖೆಯೇ ಜನರನ್ನು ಕೊಲ್ಲುವಾಗ, ಭಯೋತ್ಪಾದಕರೇಕೆ ಬೇಕು?: ರಾಜ್ ಠಾಕ್ರೆ

ವಾರ್ತಾಭಾರತಿವಾರ್ತಾಭಾರತಿ30 Sept 2017 5:56 PM IST
share
ರೈಲ್ವೆ ಇಲಾಖೆಯೇ ಜನರನ್ನು ಕೊಲ್ಲುವಾಗ, ಭಯೋತ್ಪಾದಕರೇಕೆ ಬೇಕು?: ರಾಜ್ ಠಾಕ್ರೆ

ಹೊಸದಿಲ್ಲಿ, ಸೆ. 30: ಶುಕ್ರವಾರ ಎಲ್ಫಿನ್‌ಸ್ಟೋನ್ ರೈಲು ನಿಲ್ದಾಣದ ಮೇಲ್ಸೇತುವೆಯಲ್ಲಿ ನಡೆದ ಕಾಲ್ತುಳಿತದಲ್ಲಿ 22 ಜನರು ಸಾವಿಗೀಡಾಗಿ 30ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆಗೆ ಮಹಾರಾಷ್ಟ್ರ ನವನಿರ್ಮಾಣ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಭಾರತೀಯ ರೈಲ್ವೆಯನ್ನು ದೂರಿದ್ದಾರೆ. ‘‘ ಉಗ್ರವಾದಿಗಳು ಯಾ ಪಾಕಿಸ್ತಾನದಂತಹ ವೈರಿ ನಮಗೇಕೆ ಬೇಕು ? ಜನರನ್ನು ಕೊಲ್ಲಲು ನಮ್ಮ ಸ್ವಂತ ರೈಲ್ವೆಯೇ ಸಾಕೆಂದು ಅನಿಸುತ್ತದೆ,’’ ಎಂದು ಠಾಕ್ರೆ ಹೇಳಿದ್ದಾರೆ.

ದುರಂತದ ಬಗ್ಗೆ ರೈಲ್ವೆ ಇಲಾಖೆ ನೀಡಿದ ಪ್ರತಿಕ್ರಿಯೆಯನ್ನು ಪ್ರಶ್ನಿಸಿದ ಠಾಕ್ರೆ ‘‘ಮುಂಬೈಯಲ್ಲಿ ಮಳೆ ಬರುತ್ತಿರುವುದು ಇದೇ ಮೊದಲಲ್ಲ. ಈ ದುರ್ಘಟನೆ ಮಳೆಯಿಂದಾಗಿ ನಡೆಯಿತು ಎಂದು ಅವರೇಕೆ ಹೇಳುತ್ತಿದ್ದಾರೆ?’’ ಎಂದು ಠಾಕ್ರೆ ಹೇಳಿದರು.

ವಲಸಿಗರು ತಂಡೋಪತಂಡವಾಗಿ ನಗರಕ್ಕೆ ಬರುತ್ತಾ ಇರುವ ತನಕ ಇಂತಹ ಕಾಲ್ತುಳಿತಗಳು ಮುಂಬೈಯಲ್ಲಿ ಸಂಭವಿಸುತ್ತಲೇ ಇರುತ್ತವೆ. ಈ ಸಮಸ್ಯೆಯಿಂದಲೇ ಮೂಲಭೂತ ಸೌಕರ್ಯಗಳು ಕುಸಿಯುತ್ತಿವೆ’’ ಎಂದು ಠಾಕ್ರೆ ಅಭಿಪ್ರಾಯ ಪಟ್ಟರು.

ರೈಲ್ವೆಯ ಈಗಿನ ಮೂಲಭೂತಸೌಕರ್ಯಗಳು ಸುಧಾರಿಸದ ಹೊರತು ಬುಲೆಟ್ ಟ್ರೈನ್ ಯೋಜನೆಯನ್ನು ಜಾರಿಗೊಳಿಸಲು ಬಿಡುವುದಿಲ್ಲ. ‘‘ಲೋಕಲ್ ರೈಲುಗಳ ವ್ಯವಸ್ಥೆಯನ್ನು ಸುಧಾರಿಸದೇ ಇದ್ದರೆ ಮುಂಬೈಯಲ್ಲಿ ಬುಲೆಟ್ ರೈಲು ಯೋಜನೆಗೆ ಒಂದೇ ಒಂದು ಇಟ್ಟಿಗೆ ಇಡಲು ಬಿಡುವುದಿಲ್ಲ,’’ ಎಂದು ಠಾಕ್ರೆ ಘೋಷಿಸಿದರು.

ರೈಲ್ವೆ ಮೇಲ್ಸೇತುವೆಗಳಲ್ಲಿ ಅಕ್ರಮವಾಗಿ ಕಾರ್ಯಾಚರಿಸುವ ಮಾರಾಟಗಾರರನ್ನು ತೆರವುಗೊಳಿಸಲು ಗಡುವನ್ನೂ ಅವರು ರೈಲ್ವೆ ಇಲಾಖೆಗೆ ವಿಧಿಸಿದರು. ‘‘ಇಲಾಖೆ ಕ್ರಮ ಕೈಗೊಳ್ಳದೇ ಹೋದರೆ ನಾವೇ ಕ್ರಮ ಕೈಗೊಳ್ಳಬೇಕಾಗುತ್ತದೆ,’’ ಎಂದೂ ಅವರು ಎಚ್ಚರಿಸಿದರು. ‘‘ಅಕ್ಟೋಬರ್ 5ರಂದು ರೈಲ್ವೆಗೆ ಕೈಗೊಳ್ಳಬೇಕಾದ ಕ್ರಮಗಳ ಪಟ್ಟಿಯನ್ನು ಗಡುವಿನೊಂದಿಗೆ ನೀಡಲಾಗುವುದು. ಸುಧಾರಣೆಯಾಗದೇ ಇದ್ದರೆ ನಾವೇ ನೋಡಿಕೊಳ್ಳುತ್ತೇವೆ,’’ ಎಂದು ಠಾಕೆ ಹೇಳಿದರು.

ಅಕ್ಟೋಬರ್ 5ರಂದು ತಾವು ಪಶ್ಚಿಮ ರೈಲ್ವೆ ಮುಖ್ಯ ಕಾರ್ಯಾಲಯದ ಹೊರಗೆ ಪ್ರತಿಭಟನೆ ನಡೆಸುವುದಾಗಿಯೂ ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X