Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೊದಲನೆ ಬಾರಿಗೆ ನಗರದ ರಸ್ತೆಯೊಂದಕ್ಕೆ...

ಮೊದಲನೆ ಬಾರಿಗೆ ನಗರದ ರಸ್ತೆಯೊಂದಕ್ಕೆ ಲೇಖಕಿಯ ಹೆಸರು

ಮಲ್ಲೇಶ್ವರಂನ ಮೂರನೆ ಅಡ್ಡರಸ್ತೆಗೆ ಲೇಖಕಿ ನಿರುಪಮಾ ಹೆಸರು

ವಾರ್ತಾಭಾರತಿವಾರ್ತಾಭಾರತಿ30 Sept 2017 6:49 PM IST
share
ಮೊದಲನೆ ಬಾರಿಗೆ ನಗರದ ರಸ್ತೆಯೊಂದಕ್ಕೆ ಲೇಖಕಿಯ ಹೆಸರು

ಬೆಂಗಳೂರು, ಸೆ. 30: ನಗರದ ಪ್ರಮುಖ ರಸ್ತೆಗಳಿಗೆ ನೂತನವಾಗಿ ನಾಮಕರಣ ಸಂದರ್ಭದಲ್ಲಿ ಕನ್ನಡದ ಪ್ರಮುಖ ಲೇಖಕಿಯರ ಹೆರಸನ್ನು ಪರಿಗಣಿಸಬೇಕು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಒತ್ತಾಯಿಸಿದ್ದಾರೆ.

ಶನಿವಾರ ನಗರದ ದತ್ತಾತ್ರೇಯ ವಾರ್ಡ್‌ನ ಮಲ್ಲೇಶ್ವರಂನ ಮೂರನೆ ಅಡ್ಡರಸ್ತೆಗೆ ಲೇಖಕಿ ನಿರುಪಮಾ ರಸ್ತೆ ಎಂದು ನಾಮಕರಣ ಮಾಡಿದ ಬಳಿಕ ಮಾತನಾಡಿದ ಅವರು, ನಗರದಲ್ಲಿನ ರಸ್ತೆಗೆ ಇದೇ ಮೊದಲ ಬಾರಿಗೆ ಲೇಖಕಿಯ ಹೆಸರು ಇಡಲಾಗಿದೆ. ಇದು ಪರಂಪರೆ ಆಗಿ ಮುಂದುವರೆಯಬೇಕು. ಇನ್ನು ಮುಂದೆ ನಗರದಲ್ಲಿ ರಸ್ತೆಗಳಿಗೆ ನಾಮಕರಣ ಮಾಡುವ ವೇಳೆ ಲೇಖಕಿಯರ ಹೆಸರನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಇದೇ ರಸ್ತೆಯಲ್ಲಿದ್ದ ನಿವಾಸದಲ್ಲಿ ಲೇಖಕಿ ನಿರುಪಮಾ ನಿರಂಜನ ಅವರು ಸುಮಾರು 50 ವರ್ಷಗಳಿಂದ ವಾಸವಿದ್ದರು. ಹೀಗಾಗಿ ಈ ರಸ್ತೆಗೆ ನಿರುಪಮಾ ಅವರ ಹೆಸರಿಡಬೇಕು ಎಂದು ಪಾಲಿಕೆಗೆ ಮನವಿ ಮಾಡಲಾಗಿತ್ತು. ಇಂದು ಅದು ಸಾಕಾರಗೊಂಡಿದೆ ಎಂದರು.

 ಕನ್ನಡದಲ್ಲಿ ನೂರಕ್ಕೂ ಅಧಿಕ ಕೃತಿಗಳನ್ನು ರಚಿಸಿರುವ ಲೇಖಕಿ ನಿರುಪಮಾ ಅವರು, ಕನ್ನಡದ ಹಲವು ಕೃತಿಗಳನ್ನು ತೆಲುಗಿಗೆ ಮತ್ತು ತೆಲುಗಿನ ಹಲವು ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲೇಖಕಿಯರ ಸಂಘಟಣೆಗಾಗಿ ಕರ್ನಾಟಕ ಲೇಖಕಿಯರ ಸಂಘ ಕಟ್ಟಿ ಶ್ರಮಿಸಿದ್ದಾರೆ. ಅಲ್ಲದೆ ದಕ್ಷಿಣ ಭಾರತ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಿ ಸಾಹಿತ್ಯ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿದ್ದಾರೆ ಎಂದು ತಿಳಿಸಿದರು.

 ಪಾಲಿಕೆ ಸದಸ್ಯ ಆರ್.ಎಸ್.ಸತ್ಯನಾರಾಯಣ ಮಾತನಾಡಿ, ಮಲ್ಲೇಶ್ವರಂನ ಮೂರನೆ ಅಡ್ಡರಸ್ತೆಗೆ ಲೇಖಕಿ ನಿರುಪಮಾ ಹೆಸರಿಡಲು ಪಾಲಿಕೆ ಸಭೆಯಲ್ಲಿ ಒಂದೇ ಬಾರಿ ಒಪ್ಪಿಗೆ ಸಿಕ್ಕಿತ್ತು. ಅಲ್ಲದೆ ಲೇಖಕಿ ನಿರುಪಮಾ ಹೆಸರಿಡುವ ಕುರಿತು ಪಾಲಿಕೆ ಸಂಗ್ರಹಿಸಿದ್ದ ಸಾರ್ವಜನಿಕ ಅಭಿಪ್ರಾಯದಲ್ಲಿ ಯಾವುದೇ ಆಕ್ಷೇಪವೂ ಕೇಳಿಬರಲಿಲ್ಲ. ಇದು ನಿರುಪಮಾ ಅವರ ಸಾಹಿತ್ಯ ಕೃಷಿಯಲ್ಲಿನ ಸಾಧನೆಗೆ ಹಿಡಿದ ಕನ್ನಡಿ ಎಂದು ಬಣ್ಣಿಸಿದರು.

ದತ್ತಾತ್ರೇಯ ವಾರ್ಡ್‌ನಲ್ಲಿರುವ ರಸ್ತೆಗಳಿಗೆ ಲೇಖಕಿಯರ ಹೆಸರಿಡಲು ಮನವಿಗಳು ಬಂದರೆ ಸ್ವಾಗತ. ಮುಂದೆ ರಸ್ತೆಗಳಿಗೆ ಹೆಸರಿಡುವ ವೇಳೆ ಲೇಖಕಿಯ ಹೆಸರನ್ನು ಪರಿಗಣಿಸಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್, ವಿಮರ್ಶಕ ಪ್ರೊ.ಎಂ.ಎಚ್.ಕೃಷ್ಣಯ್ಯ ಸೇರಿದಂತೆ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X