ಮದ್ದೂರು : ದಂಪತಿ ನೇಣಿಗೆ ಶರಣು

ಮದ್ದೂರು, ಸೆ.30: ತಾಲೂಕಿನ ಸಾದೊಳಲು ಗ್ರಾಮದಲ್ಲಿ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ರವೀಶ್(35) ಹಾಗು ಅರುಣ (28) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಇವರಿಬ್ಬರಿಗೂ 12 ವರ್ಷದ ಹಿಂದೆ ಮದುವೆಯಾಗಿದ್ದು, 8 ವರ್ಷದ ಪುತ್ರನಿದ್ದಾನೆ.
ಅರುಣ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ರವೀಶ್ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಿಲ್ಲ ಎನ್ನಲಾಗಿದೆ.
Next Story





