Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ದಸರಾ ವಿಶೇಷ
  3. ವಿಜೃಂಭಣೆಯಿಂದ ನಡೆದ ಜಂಬೂ ಸವಾರಿ...

ವಿಜೃಂಭಣೆಯಿಂದ ನಡೆದ ಜಂಬೂ ಸವಾರಿ ಮೆರವಣಿಗೆ

ವಾರ್ತಾಭಾರತಿವಾರ್ತಾಭಾರತಿ30 Sept 2017 8:32 PM IST
share
ವಿಜೃಂಭಣೆಯಿಂದ ನಡೆದ ಜಂಬೂ ಸವಾರಿ ಮೆರವಣಿಗೆ

ಮೈಸೂರು,ಸೆ.30: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ಕೊನೆಯ ಆಕರ್ಷಣೆಯಾದ ವೈಭವದ ಜಂಬೂಸವಾರಿ ಸಾಂಸ್ಕೃತಿಕ ಶನಿವಾರ ಮುಗಿಲು ಮಟ್ಟುವ ಹರ್ಷೋದ್ಘಾರಗಳ ನಡುವೆ ನಡೆಯಿತು. ಇಂದಿನ ಜಂಬೂ ಸವಾರಿ ಯದುವಂಶದ ಅರಸರ ಗತವೈಭವ, ಪರಂಪರೆ ಹಾಗೂ ಇತಿಹಾಸವನ್ನು ನೆನಪಿಸುವಂತಿತ್ತು.

ಅರಮನೆಯ ಬಲರಾಮ ದ್ವಾರದಲ್ಲಿ ಮಧ್ಯಾಹ್ನ 2.15ಕ್ಕೆ ಶುಭಮಕರ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಂದಿ ಧ್ವಜಕ್ಕೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿದರು. ನಂತರ ಸಂಜೆ 4.45ಕ್ಕೆ ಅರಮನೆಯ ಮುಖ್ಯದ್ವಾರದಲ್ಲಿ ನಿರ್ಮಿಸಲಾಗಿದ್ದ ವಿಶೇಷ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶುಭ ಕುಂಬ ಲಗ್ನದಲ್ಲಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನರಾಗಿದ್ದ ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ವಿದ್ಯುಕ್ತ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ನಗರ ಸಶಸ್ತ್ರ ಪಡೆಯ (ಸಿಎಆರ್) ಪೊಲೀಸರು, 21 ಕುಶಾಲತೋಪುಗಳನ್ನು ಹಾರಿಸಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ ಮಹದೇವಪ್ಪ, ಯದುವಂಶಸ್ಥ ಯುವರಾಜ ಯದುವೀರ್, ಮೇಯರ್ ರವಿಕುಮಾರ್, ಜಿಲ್ಲಾಧಿಕಾರಿ ಡಿ. ರಂದೀಪ್, ನಗರ ಪೊಲೀಸ್ ಆಯುಕ್ತ ಎ. ಸುಬ್ರಮಣ್ಯೇಶ್ವರ ರಾವ್ ಸೇರಿದಂತೆ ಸಂಸದರು, ಶಾಸಕರು, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಅಂಬಾರಿಯನ್ನು ಹೊತ್ತ ಅರ್ಜುನ ಗಜಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಿದ್ದರೆ, ಉಳಿದ ಗಜಪಡೆ ಅವನನ್ನು ಹಿಂಬಾಲಿಸಿದ್ದು ನೋಡುಗರ ಕಣ್ಮನ ಸೆಳೆಯುತ್ತಿತ್ತು. ಕುಶಾಲತೋಪುಗಳ ಭಾರೀ ಶಬ್ಧಕ್ಕೆ ಹೆದರದೆ ಗಜರಾಜ ಅರ್ಜುನ 750 ಕೆಜಿ ತೂಕದ ಚಾಮುಂಡೇಶ್ವರಿ ಉತ್ಸವಮೂರ್ತಿಯನ್ನು  ಅಂಬಾರಿಯಲ್ಲಿ ಹೊತ್ತು ಮೆರವಣಿಗೆಯಲ್ಲಿ ಸಾಗಿತ್ತು.

ಇದಕ್ಕೂ ಮುನ್ನ ರಾಜವಂಶಸ್ಥ ಯದುವೀರ್ ಒಡೆಯರ್ ಅರಮನೆಯಲ್ಲಿ ವಿಜಯದಶಮಿ ಹಾಗೂ ಶಮಿಪೂಜೆ ನಡೆಸಿದರು. ಕಳೆದ 9 ದಿನಗಳಿಂದ ಸಾಂಸ್ಕೃತಿಕ ನಗರಿಯಲ್ಲಿ ಕಿನ್ನರ ಲೋಕವನ್ನೇ ಸೃಷ್ಟಿಸಿ ಲಕ್ಷಾಂತರ ಜನಮನ ಸೂರೆಗೊಂಡ ವಿಜೃಂಭಣೆಯ, ರಸದೌತಣದ ಕಾರ್ಯಕ್ರಮಗಳನ್ನು ಕಣ್ತುಂಬಿಕೊಂಡು ಅಂತಿಮ ಪ್ರಮುಖ ಘಟ್ಟ ಜಂಬೂ ಸವಾರಿ ಮೆರವಣಿಗೆಗೆ ಸಾಕ್ಷಿಭೂತರಾದರು. ರಾಜಬೀದಿಗಳಲ್ಲಿ ಜಂಬೂಸವಾರಿ ಮೆರವಣಿಗೆ ಸಾಗುತ್ತಿದ್ದಂತೆ ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಜನಸ್ತೋಮ ಹರ್ಷೋದ್ಗಾರ ಮಾಡುತ್ತಿದ್ದುದು ಕಂಡುಬಂತು.

ಪೋಲಿಸ್ ಬ್ಯಾಂಡ್‍ಗಳ ಸುಶ್ರಾವ್ಯ ಸಂಗೀತ, ಅರಮನೆಯ ವಾದ್ಯವೃಂದ, ಕಂಸಾಳೆ, ವೀರಗಾಸೆ, ಡೊಳ್ಳು ಕುಣಿತ, ಪೂಜಾಕುಣಿತ, ಕರಡಿ ಮಜಲು, ನಂದಿಕೋಲು, ಮರಗಾಲು, ಹುಲಿವೇಷಧಾರಿಗಳೂ ಸೇರಿದಂತೆ ಜಾನಪದ ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ದಸರಾ ಜಂಬೂಸವಾರಿ ಮೆರವಣಿಗೆಗೆ ಮೆರಗು ತಂದಿದ್ದವು. ರಾಜ್ಯದ ಕಲಾ ತಂಡಗಳಲ್ಲದೆ, ಉತ್ತರ ಪ್ರದೇಶ, ಪಂಜಾಬ್, ತೆಲಂಗಾಣ, ಒಡಿಸ್ಸಾ, ಡಾರ್ಜಲಿಂಗ್, ಹರಿಯಾಣ ರಾಜ್ಯಗಳ ಸುಮಾರು 40 ತಂಡಗಳು ಅತ್ಯಾಕರ್ಷಕ ನೃತ್ಯ ಪ್ರದರ್ಶನ ನೀಡಿ ನೋಡುಗರ ಪ್ರಶಂಸೆಗೆ ಪಾತ್ರವಾದವು.

ನಾಡಿನ ಕಲೆ, ಸಾಹಿತ್ಯ, ವಾಸ್ತುಶಿಲ್ಪ, ಪಾರಂಪರೆ, ಪರಿಸರ, ಐತಿಹಾಸಿಕ ತಾಣಗಳು, ಪುರಾಣ ಪ್ರಸಿದ್ಧ ತಾಣಗಳು, ದೇವಾಲಯಗಳು ಮುಂತಾದ ಸ್ತಬ್ಧ ಚಿತ್ರಗಳ ಮೆರವಣಿಗೆ ಸಾಲುಗಟ್ಟಿ ಸಾಗಿತ್ತು. ಇದು ನೋಡುಗರಲ್ಲಿ ಕುತೂಹಲ ಮೂಡಿಸಿತ್ತು.

ಎಲ್ಲ ಜಿಲ್ಲೆಗಳ ಪ್ರಮುಖ ಐತಿಹಾಸಿಕ ಮತ್ತು ಪುಣ್ಯ ಕ್ಷೇತ್ರಗಳ ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಇದ್ದವು. ವೀರರಾಣಿ ಕಿತ್ತೂರು ಚೆನ್ನಮ್ಮ, ಒನಕೆ ಓಬವ್ವ, ಬುದ್ಧ, ಬಸವ, ಗಾಂಧಿ, ಅಂಬೇಡ್ಕರ್ ಮುಂತಾದ ದಾರ್ಶನಿಕರ ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಸಾಗಿದವು.

ಅರಮನೆ ಆವರಣದಿಂದ ಬನ್ನಿಮಂಟಪದ ಕವಾಯತು ಮೈದಾನದವರೆಗೆ ಜಂಬೂಸವಾರಿ ಮೆರವಣಿಗೆ ನಡೆಯಿತು. ದೇಶ-ವಿದೇಶಗಳ ಪ್ರವಾಸಿಗರು ಮೆರವಣಿಗೆಯ ವೈಭವವನ್ನು ಕಣ್ತುಂಬಿಕೊಂಡರು. ಮುನ್ನೆಚ್ಚರಿಕೆ ಕ್ರಮವಾಗಿ ಮೆರವಣಿಗೆಯುದ್ದಕ್ಕೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಮೆರವಣಿಗೆಯಲ್ಲಿ ಕೆಎಸ್‍ಆರ್‍ಪಿ, ಅಗ್ನಿಶಾಮಕ ಸೇವೆ, ಮೌಂಟ್ ಬಿಟಾಲಿಯನ್, ಕರ್ನಾಟಕ ಪೊಲೀಸ್ ಬ್ಯಾಂಡ್, ಸ್ಕೌಟ್ಸ್ ಅಂಡ್ ಗೈಡ್ಸ್, ಸೇವಾ ದಳ, ಮಹಿಳಾ ಪೊಲೀಸ್, ರಿಸರ್ವ್ ಪೊಲೀಸ್ ಸೇರಿದಂತೆ ಅರಮನೆಯ ವಾದ್ಯವೃಂದ, ಪಿರಂಗಿ ಗಾಡಿಗಳು, ವಿಶೇಷ ವೇಷಧಾರಿಗಳ ತಂಡ, ಅಲೆಮಾರಿಗಳ ತಂಡ ಸೇರಿದಂತೆ 30 ತಂಡಗಳು ಪಾಲ್ಗೊಂಡಿದ್ದವು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X