ಅ.2: ಮಾತೃಪೂರ್ಣ ಯೋಜನೆಗೆ ಚಾಲನೆ
ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾತೃಪೂರ್ಣ ಯೋಜನೆಯ ಉದ್ಘಾಟನೆ ಹಾಗೂ ಗರ್ಭಿಣಿ ಹಾಗು ಬಾಣಂತಿಯರಿಗೆ ಪೌಷ್ಠಿಕ ಬಿಸಿಯೂಟ ಕಾರ್ಯಕ್ರಮದ ಉದ್ಘಾಟನೆಯು ಅ.2ರ ಸೋಮವಾರ ಅಪರಾಹ್ನ 12:30ಕ್ಕೆ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ಇರುವ ಬೋರ್ಡ್ ಹೈಸ್ಕೂಲ್‌ನಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸುವರು. ಇದೇ ಸಂದರ್ಭ ದಲ್ಲಿ ಗರ್ಭಿಣಿ, ಬಾಣಂತಿಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಬೆಳಗ್ಗೆ 11 ರಿಂದ ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದೆ.
ಮಕ್ಕಳಲ್ಲಿ ಅಪೌಷ್ಠಿಕತೆಯನ್ನು ತಡೆಗಟ್ಟುವ ಹಾಗೂ ಗರ್ಭಿಣಿ, ಬಾಣಂತಿ ಯರಿಗೆ ಉತ್ತಮ ಆರೋಗ್ಯ ಒದಗಿಸುವ ಉದ್ದೇಶವುಳ್ಳ ಈ ಯೋಜನೆಯಲ್ಲಿ ಅರ್ಹ ಗರ್ಭಿಣಿ ಬಾಣಂತಿಯರಿಗೆ ಅವರ ಪ್ರದೇಶದ ಅಂಗನವಾಡಿ ಕೇಂದ್ರ ಗಳಲ್ಲಿ ಪೂರಕ ಪೌಷ್ಠಿಕ ಆಹಾರ ವಿತರಣೆ ಮಾಡಲಾಗುವುದು. ಮಾತೃಪೂರ್ಣ ಯೋಜನೆಯಡಿ ಬಿಸಿಯೂಟವನ್ನು ವಾರದ 6 ದಿನ ಒದಗಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿದೇಶರ್ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





