ಮಧ್ಯಸ್ಥಿಕೆ ಮತ್ತು ಸಮಾಲೋಚನಾ ದಿನಾಚರಣೆ
ಉಡುಪಿ, ಸೆ.30: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಉಡುಪಿ, ಗ್ರಾಪಂ ಉದ್ಯಾವರ, ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳು ಉದ್ಯಾವರ, ಪರಿವರ್ತನಾ ನವೋದಯ ಸ್ವಸಹಾಯ ಸಂಘಗಳ ಒಕ್ಕೂಟ ಉದ್ಯಾವರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ಹಾಗೂ ಬಿಲ್ಲವ ಮಹಾಜನ ಸಂಘ ಉದ್ಯಾವರ ಇವುಗಳ ಸಂಯುಕ್ತ ಆಶ್ರಯದಲ್ಲಿ ‘ಮಧ್ಯಸ್ಥಿಕೆ ಮತ್ತು ಸಮಾಲೋಚನಾ ದಿನಾಚರಣೆ’ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಅ.2ರಂದು ಬೆಳಗ್ಗೆ 10 ಗಂಟೆಗೆ ಉದ್ಯಾವರ ಗ್ರಾಪಂ ಸಭಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿ ವಿವೇಕಾನಂದ ಪಂಡಿತ್ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಉದ್ಯಾವರ ಗ್ರಾಪಂ ಅಧ್ಯಕ್ಷ ರಿಯಾಜ್ ಇಸ್ಮಾಯಿಲ್ ಪಳ್ಳಿ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
Next Story





