ತೆಂಕನಿಡಿಯೂರು ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ಕಾರ್ಯಗಾರ

ಉಡುಪಿ, ಸೆ.30: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇದರ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗ, ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಹಾಗೂರಾಷ್ಟ್ರೀಯ ಸ್ವ-ಸಹಾಯ ತರಬೇತಿ ಸಂಸ್ಥೆ ಅಂಬಲಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ರಸ್ತೆ ಸುರಕ್ಷತಾ ಕಾರ್ಯಗಾರ ಇತ್ತೀಚೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಉಡುಪಿ ಪೊಲೀಸ್ ಡಿವೈಎಸ್ಪಿ ಎಸ್.ಜೆ.ಕುಮಾರಸ್ವಾಮಿ ಕಾರ್ಯಗಾರವನ್ನು ಉದ್ಘಾಟಿಸಿ ಜಾಗೃತಿ ಕರಪತ್ರಗಳನ್ನು ಬಿಡುಗಡೆಗೊಳಿಸಿದರು. ರಸ್ತೆ ಸುರಕ್ಷತಾ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಿ ಇತರರಿಗೂ ಪಾಲಿಸುವಂತೆ ಜಾಗೃತಿ ಮೂಡಿಸಿ ತನ್ಮೂಲಕ ಸುರಕ್ಷಿತ ಸಮಾಜವನ್ನು ನಿರ್ಮಿಸಲು ಮುಂದಾಗಬೇಕು ಎಂದವರು ಕರೆ ನೀಡಿದರು.
ಮೋಟಾರು ವಾಹನಗಳ ಹಿರಿಯ ತಪಾಸಣಾಧಿಕಾರಿ ಎನ್.ವಿಶ್ವನಾಥ ನಾಯ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಮಾರ್ಗದರ್ಶನ ನೀಡಿದರು. ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಎಸ್. ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಮಲ್ಪೆಆರಕ್ಷಕ ಠಾಣೆಯ ಪೊಲೀಸ್ ಉಪನಿರೀಕ್ಷಕ ದಾಮೋದರ ಕೆ, ರಾಷ್ಟ್ರೀಯ ಸ್ವ-ಸಹಾಯ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಅಶೋಕ್ ಕೆ, ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಸಂಯೋಜಕ ಡಾ. ದುಗ್ಗಪ್ಪಕಜೆಕಾರ್ ಉಪಸ್ಥಿತರಿದ್ದರು.
ಎಂಎಸ್‌ಡಬ್ಲು ವಿದ್ಯಾರ್ಥಿಗಳಾದ ಬಾಬಾ ವೀರಾಪೂರ ಸ್ವಾಗತಿಸಿ, ಅಕ್ಷತಾ ವಂದಿಸಿದರು. ಸಂತೋಷ್ ಕಾರ್ಯಕ್ರಮ ನಿೂಪಿಸಿದರು.







