ತುರ್ತು ಬಿಡುಗಡೆಗೆ ಶಶಿಕಲಾ ಅರ್ಜಿ

ಬೆಂಗಳೂರು, ಸೆ.30:ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದಲ್ಲಿರುವ ಎಐಎಡಿಎಂಕೆ ಪಕ್ಷದ ಮಾಜಿ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ತುರ್ತು ಬಿಡುಗಡೆಗಾಗಿ ಜೈಲು ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿರುವುದಾಗಿ ತಿಳಿದುಬಂದಿದೆ.
ಪತಿ ಎಂ.ನಟರಾಜನ್ ಅವರ ಆರೋಗ್ಯ ಚಿಂತಾಜನಕವಾಗಿರುವ ಹಿನ್ನೆಲೆಯಲ್ಲಿ ಅವರನ್ನು ನೋಡಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ.ಮ್ಯಾಜಿಸ್ಟ್ರೇಟ್‌ರ ಅನುಮತಿ ಪಡೆಯಲು ಶಶಿಕಲಾ ಅರ್ಜಿ ಸಲ್ಲಿಸಿದ್ದು, ಈ ಬಗ್ಗೆ ಅಕ್ಟೋಬರ್ 3 ರಂದು ಜೈಲು ಅಧಿಕಾರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇನ್ನು ಪೆರೋಲ್‌ಗೆ ಅರ್ಜಿ ಸಲ್ಲಿಸಲು ಶಶಿಕಲಾಗೆ ಅರ್ಹತೆ ಇಲ್ಲವಾಗಿದೆ. ಶಿಕ್ಷೆ ಪ್ರಮಾಣದ ಅರ್ಧ ಅವಧಿಯನ್ನು ಜೈಲಿನಲ್ಲಿ ಕಳೆದಿದ್ದರೆ ಮಾತ್ರ ಪೆರೋಲ್ ನೀಡಲಾಗುತ್ತದೆ. ಶಶಿಕಲಾ ಪತಿ ಎಂ.ನಟರಾಜನ್ ಅನಾರೋಗ್ಯದಿಂದ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Next Story





