ಅ.1ರಂದು ಮಾಜಿ ಶಾಸಕ ನೆ.ಲ.ನರೇಂದ್ರ ಬಾಬು ಬಿಜೆಪಿಗೆ ಸೇರ್ಪಡೆ
ಬೆಂಗಳೂರು, ಸೆ. 30: ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಶಾಸಕ ನೆ.ಲ.ನರೇಂದ್ರಬಾಬು ಅ.1ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.
ಅ.1ರಂದು ಮಧ್ಯಾಹ್ನ 2ಂಟೆಗೆ ಇಲ್ಲಿನ ಮಲ್ಲೇಶ್ವರಂನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಇದೇ ಸಂದರ್ಭದಲ್ಲಿ ಮಾಹಿತಿ ಆಯೋಗದ ಮಾಜಿ ಆಯುಕ್ತ ಶಂಕರ್ ಆರ್.ಪಾಟೀಲ್, ಹಾಗೂ 20ಕ್ಕೂ ಅಧಿಕ ಮಂದಿ ವಕೀಲರು ಜೆಡಿಎಸ್ ತೊರೆದು ಬಿಜೆಪಿಗೆ ಸೇರಲಿದ್ದಾರೆ ಎಂದು ತಿಳಿಸಲಾಗಿದೆ.
Next Story





