ಬೈಲೂರು ವಾರ್ಡ್‌ನ ಕಾಂಗ್ರೆಸ್ ಕಾರ್ಯಕರ್ತರ ಸಭೆ
ಉಡುಪಿ, ಸೆ.30: ಉಡುಪಿ ನಗರಸಭೆಯ 31ನೇ ಬೈಲೂರು ವಾರ್ಡ್‌ನ ಬೂತ್ ಸಂಖ್ಯೆ 194ರ ಕಾಂಗ್ರೆಸ್ ಕಾರ್ಯಕರ್ತರ ಸಭೆ ಅ.1ರ ಸಂಜೆ 4:30ಕ್ಕೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸತೀಶ್ ಅಮೀನ್ ಪಡುಕರೆ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಉಡುಪಿ ಚಿಟ್ಪಾಡಿ ಶಾರದಾಂಬ ದೇವಸ್ಥಾನದ ಸಭಾಂಗಣದಲ್ಲಿ ನಡೆಯ ಲಿರುವ ಈ ಸಭೆಯಲ್ಲಿ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಉಪಸ್ಥಿತ ರಿದ್ದು ಪಕ್ಷ ಸಂಘಟನೆಯ ಕುರಿತು ಮಾರ್ಗದರ್ಶನ ನೀಡಲಿರುವರು. ಪಕ್ಷದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿರುವ ಈ ಸಭೆಯಲ್ಲಿ ಬೂತ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಕಾಂಗ್ರೆಸ್ ಮುಖಂಡ, ನಗರಸಭಾ ಸದಸ್ಯ ರಮೇಶ್ ಕಾಂಚನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





