ಬಿಬಿಎಂಪಿ ಸದಸ್ಯೆಯ ಪತಿ ವಿರುದ್ಧ ಎಫ್‌ಐಆರ್
ಬೆಂಗಳೂರು, ಅ.1: ಬಿಬಿಎಂಪಿ ಜೆಪಿ ಪಾರ್ಕ್ ವಾರ್ಡ್‌ನ ಬಿಜೆಪಿ ಪಕ್ಷದ ಸದಸ್ಯೆ ಮಮತಾ ಅವರ ಪತಿ ವಾಸುದೇವ್ ವಿರುದ್ಧ ಇಲ್ಲಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ ಎಂದು ತಿಳಿದು ಬಂದಿದೆ.
ಜೆಪಿ ಪಾರ್ಕ್ ವಾರ್ಡ್ ವ್ಯಾಪ್ತಿಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಸಂಬಂಧ ಪಾಲಿಕೆಯ ಇಂಜಿನಿಯರ್‌ಗೆ ಬೆದರಿಕೆ ಹಾಕಿದ ಆರೋಪದ ಮೇಲೆ ವಾಸುದೇವ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎನ್ನಲಾಗಿದೆ.
ವಾರ್ಡ್‌ನಲ್ಲಿರುವ ಉದ್ಯಾನವನದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಕಾರ್ಯ ನಡೆಯುತ್ತಿದ್ದಾಗ ವಾಸುದೇವ್ ಅವರು ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿರುವುದಾಗಿ ಇಂಜಿನಿಯರ್ ನಾಗರಾಜ್ ಎಂಬುವರು ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಯಶವಂತ ಪುರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
Next Story





