ಯುವತಿಯ ಕೊಲೆ
ಬೆಂಗಳೂರು, ಅ.1: ಮಧ್ಯರಾತ್ರಿ ಯುವತಿಯೊಬ್ಬಕೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದಿರುವ ಘಟನೆ ಇಲ್ಲಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೊಲೆಯಾದ ಯುವತಿಗೆ ಸುಮಾರು 25 ವರ್ಷ ವಯಸ್ಸು ಆಗಿದ್ದು, ಆಕೆಯ ಹೆಸರು, ವಿಳಾಸ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ರವಿವಾರ ಬೆಳಗ್ಗೆ ನಾಗರಬಾವಿಯ ಖಾಲಿ ಜಾಗದಲ್ಲಿ ಮೂತ್ರ ವಿಸರ್ಜನೆಗೆ ಹೋಗಿದ್ದ ಸ್ಥಳೀಯರೊಬ್ಬರು ಮೃತದೇಹ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಧಾವಿಸಿದ ಪೊಲೀಸರು, ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಪರೀಕ್ಷೆಗೆ ರವಾನಿದ್ದಾರೆಂದು ತಿಳಿದು ಬಂದಿದೆ.
Next Story





