Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜನಾಂಗಗಳ ಮೇಲೆ ದ್ವೇಷ ಹರಡಿ ರಾಜಕೀಯ ಲಾಭ:...

ಜನಾಂಗಗಳ ಮೇಲೆ ದ್ವೇಷ ಹರಡಿ ರಾಜಕೀಯ ಲಾಭ: ಮೀನಾಕ್ಷಿ ಸುಂದರಂ

ವಾರ್ತಾಭಾರತಿವಾರ್ತಾಭಾರತಿ1 Oct 2017 9:17 PM IST
share

ಬೆಂಗಳೂರು, ಅ.1: ವ್ಯಕ್ತಿ, ಜನಾಂಗಗಳ ಮೇಲೆ ದ್ವೇಷವನ್ನು ಹರಡಿ ರಾಜಕೀಯ ಲಾಭ ಪಡೆಯಲಾಗುತ್ತಿದೆ. ಇದಕ್ಕೆ ಬೆಂಬಲವಾಗಿ ನಿಂತಿರುವುದು ಕೆಲವು ಮುದ್ರಣ-ಇಲೆಕ್ಟ್ರಾನಿಕ್ ಮಾಧ್ಯಮಗಳಿಂದ ಮನಸ್ಸುಗಳನ್ನು ಕದಡುವ ವಿಷ ನೀಡಲಾಗುತ್ತಿದೆ.ಇದರ ವಿರುದ್ಧ ಶಕ್ತಿಯುತವಾಗಿ ಹೋರಾಟಬೇಕು ಎಂದು ಸಿಐಟಿಯು ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಮೀನಾಕ್ಷಿ ಸುಂದರಂ ಹೇಳಿದ್ದಾರೆ.

ರವಿವಾರ ನಗರದ ಅರಮನೆ ರಸ್ತೆಯ ಕೊಂಡಜ್ಜಿ ಸಭಾಂಗಣದಲ್ಲಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್(ಡಿವೈಎಫ್‌ಐ) ಆಯೋಜಿಸಿದ್ದು, ಮೂರು ದಿನಗಳ 11ನೆಯ ರಾಜ್ಯ ಸಮ್ಮೇಳವನ್ನು ಉದ್ಘಾಟಿಸಿ ಮಾತನಾಡಿ ಅವರು, ನಮ್ಮನ್ನು ಆಳುವ ವರ್ಗಗಳು ಮುನ್ನಚ್ಚರಿಕೆ ಕ್ರಮ ಕೈಗೊಂಡಿದ್ದು, ಈಗಾಗಲೇ ಉದ್ಯೋಗ, ಬಡತನ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ವಿಫಲಗೊಂಡಿರುವ ಸರಕಾರಗಳ ವಿರುದ್ಧ ಭಾರೀ ಪ್ರತಿರೋಧ ವ್ಯಕ್ತವಾಗಬೇಕಿತ್ತು. ಆದರೆ, ಇದನ್ನು ದಿಕ್ಕು ತಪ್ಪಿಸಲು ಧರ್ಮ ಮೂಲಭೂತವನ್ನು ಸೃಷ್ಟಿ ಹಾಕಿದ್ದಾರೆ ಎಂದು ತಿಳಿಸಿದರು.

ಡಿವೈಎಫ್‌ಐ ರಾಷ್ಟ್ರೀಯ ಅಧ್ಯಕ್ಷ ಮುಹಮ್ಮದ್ ರಿಯಾಝ್ ಮಾತನಾಡಿ, ಇಂದು ಬೆಳ್ಳಗೆ ಅನಿಲ ಬೆಲೆ ಏರಿಕೆಯಾಗಿದೆ. ಪೆಟ್ರೋಲ್ ಬೆಲೆ ನಿರ್ಧಾರದ ಹಕ್ಕನ್ನು ಖಾಸಗಿ ಕಂಪೆನಿಗಳಿಗೆ ನೀಡಲಾಗಿದೆ. 3 ವರ್ಷದಲ್ಲಿ 24 ಬಾರಿ ಬೆಲೆ ಏರಿಕೆ ಆಗಿದ್ದು, ಜನರ ಹಣವನ್ನು ಹಗಲು ದರೋಡೆ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.

ಇತ್ತೀಚೆಗೆ ಮುಂಬೈನಲ್ಲಿ ರೈಲ್ವೆ ಅಪಘಾತದಲ್ಲಿ 22 ಜನ ಮೃತಪಟ್ಟಿದ್ದು, ಇದಕ್ಕೆ ಮೂಲ ಕಾರಣ ರೈಲ್ವೆ ಇಲಾಖೆಯಲ್ಲಿನ ಖಾಲಿ ಹುದ್ದೆ ಭರ್ತಿಯಾಗದೇ ಇರುವುದು. ಅಲ್ಲದೆ, ಇಂತಹ ಪರಿಸ್ಥಿತಿಯಲ್ಲಿ ದೇಶದ ಪ್ರಧಾನಿಗಳು ಬುಲೆಟ್ ಟ್ರೈನ್‌ಗಳು ತರಲು ಹೊರಟಿದ್ದಾರೆ ಎಂದ ಅವರು, ಕೋಮುವಾದಿಗಳು ವಿಚಾರವಾದಿಗಳನ್ನು ಕೊಲ್ಲಲು ಸಾಧ್ಯವಿಲ್ಲ ಎಂದರು.

ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ, ತುಳುನಾಡಿನಲ್ಲಿ ಮತೀಯ ಶಕ್ತಿಗಳಿಂದ ಆಶ್ರಫ್ ಹಾಗೂ ಶರತ್ ಮಡಿವಾಳ ಕೊಲೆಯಾಗಿದ್ದು, ಅವರ ಕುಟುಂಬಗಳು ಇಂದು ಬೀದಿ ಪಾಲಾಗಿದ್ದಾರೆ. ಸಮಾಜದಲ್ಲಿ ಎಲ್ಲರೂ ಒಂದಾಗಿ ಬಾಳುವ ವಾತಾವರಣ ನಿರ್ಮಿಸಬೇಕಾಗಿದೆ ಎಂದು ಅವರು ಹೇಳಿದರು.

ಕರಾವಳಿಯ ಯುದ್ಧ ಭೂಮಿಯಲ್ಲಿ ಡಿವೈಎಫ್‌ಐ ಕೋಮುವಾದದ ವಿರುದ್ಧ ಹೋರಾಟದಲ್ಲಿ ನಿರತವಾಗಿದೆ. ಈ ಹಿಂದೆ, ಸೌಹಾರ್ದ ರ್ಯಾಲಿಗಾಗಿ ಕೇರಳದ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಬಂದಿದ್ದ ವೇಳೆ ಕೋಮುವಾದಿಗಳು ಮಂಗಳೂರು ಬಂದ್‌ಗೆ ಕರೆ ನೀಡಿದ್ದರು. ಆದರೆ, ಜನರ ಬೆಂಬಲದಿಂದ ಸೌಹಾರ್ದ ರ್ಯಾಲಿಯನ್ನು ಯಶಸ್ವಿಗೊಳಿಸಲಾಯಿತು. ಕೋಮುವಾದಿಗಳು ದ್ವೇಷ ಹರಡಿದರೆ ನಾವು ಪ್ರೀತಿ ಹಂಚುವೆವುದಾಗಿ ಕರೆ ನೀಡಿದರು.

ಡಿವೈಎಫ್‌ಐ ರಾಜ್ಯ ಕಾರ್ಯದರ್ಶಿ ಬಿ.ರಾಜಶೇಖರ ಮೂರ್ತಿ ಮಾತನಾಡಿ, ಯುವ ಜನರು ದೇಶದ ಸಂಪತ್ತು. ದೇಶ, ಸಮಾಜದ ಅಭಿವೃದ್ಧಿ, ಪರಿವರ್ತನೆಗೆ ಯುವ ಶಕ್ತಿಯನ್ನು ಬಳಕೆ ಮಾಡಿಕೊಳ್ಳಬೇಕು. ಆದರೆ, ಇಂದು ಕೋಟ್ಯಾಂತರ ಯುವ ಜನತೆ ಕೆಲಸ ಇಲ್ಲದೆ ಅಭದ್ರತೆಯಿಂದ ನರಳುವಂತಾಗಿದೆ. ಅಸಂಘಟಿತ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಯುವ ಜನತೆ ಆತಂಕದಿಂದ ಬದುಕು ನಡೆಸುವಂಥ ವಾತಾವರಣ ನಿರ್ಮಾಣವಾಗಿದೆ ಎಂದರು.

ಸಮ್ಮೇಳನದಲ್ಲಿ ಹಿರಿಯ ಕಾರ್ಮಿಕ ಮುಖಂಡ ಆರ್.ಶ್ರೀನಿವಾಸ್, ಡಿವೈಎಫ್‌ಐ ಅಖಿಲ ಭಾರತ ಉಪಾಧ್ಯಕ್ಷೆ ದೀಪಾ, ಮಹಿಳಾ ಹೋರಾಟಗಾರ್ತಿ ಕೆ.ಎಸ್.ವಿಮಲಾ, ಹಿರಿಯ ಪತ್ರಕರ್ತ ಜಿ.ಎನ್.ಮೋಹನ್, ಡಿವೈಎಫ್‌ಐ ರಾಜ್ಯ ಸಮಿತಿ ಸದಸ್ಯರಾದ ಸಂತೋಷ್ ಬಜಾಲ್, ಬಸವರಾಜ ಪೂಜಾರ್ ಸೇರಿ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X