ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಸಮಿತಿ ವತಿಯಿಂದ 4ಜಿ ಕ್ಯಾಂಪ್ ಗೆ ಚಾಲನೆ

ಉಜಿರೆ, ಅ.1: ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಸಮಿತಿಯ ವತಿಯಿಂದ '4ಜಿ ಕ್ಯಾಂಪ್' ಎಸ್ಸೆಸ್ಸೆಫ್ ದ.ಕ ಜಿಲ್ಲಾಧ್ಯಕ್ಷ ಕೆ.ಪಿ ಸಿರಾಜುದ್ದೀನ್ ಸಖಾಫಿ ಕನ್ಯಾನ ಅವರ ಅಧ್ಯಕ್ಷತೆಯಲ್ಲಿ ಉಜಿರೆ ಮಲ್ಜಾ ಕ್ಯಾಂಪಸ್ ನಲ್ಲಿ ನಡೆಯಿತು.
ಮಲ್ಜಾ ವಿದ್ಯಾ ಸಂಸ್ಥೆಯ ಸೈಯದ್ ಜಲಾಲುದ್ದೀನ್ ತಂಙಳ್ ಅವರ ದುಆ ದೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯಾಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಂಡಗೇರಿ ಉದ್ಘಾಟಿಸಿದರು.
ವೇದಿಕೆಯಲ್ಲಿ ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಸುಫ್ಯಾನ್ ಸಖಾಫಿ, ಎಸ್ ವೈ ಎಸ್ ದ.ಕ. ಜಿಲ್ಲಾ ಉಪಾಧ್ಯಕ್ಷ ಉಮರ್ ಸಖಾಫಿ ಎಡಪ್ಪಾಲ, ಎಸ್ಸೆಸ್ಸೆಫ್ ರಾಜ್ಯ ಸದಸ್ಯ ರಫೀಕ್ ಸಖಾಫಿ ಕೊಡಗು, ಬ್ರೈಟ್ ವಿದ್ಯಾ ಸಂಸ್ಥೆ ಮುಡಿಪು ಮ್ಯಾನೇಜರ್ ಅಬ್ದುಲ್ ಜಲೀಲ್ ಮೋಂಟುಗೋಳಿ, ನಿವೃತ ಎಸ್.ಪಿ ಸೀತಾಂಬರ ಹೆರಾಜೆ, ಅಂತಾರಾಷ್ಟ್ರೀಯ ಲಯನ್ಸ್ ಕ್ಲಬ್ ಅಧ್ಯಕ್ಷ ಧರನೇಂದ್ರ ಜೈನ್, ಭಾರತ ಸೇವಾ ದಳ ಉಡುಪಿ ಜಿಲ್ಲಾ ಘಟಕ ಅಧ್ಯಕ್ಷ ಮಹೇಶ್ ಪತ್ತರ ಉಪಸ್ಥಿತರಿದ್ದರು.
ಕ್ಯಾಂಪ್ ಅಮೀರ್ ಶರೀಫ್ ಸಅದಿ ಕಿಲ್ಲೂರು ಸ್ವಾಗತಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಲಂದರ್ ಪದ್ಮುಂಜೆ ವಂದಿಸಿದರು.





