ಮಂಗಳ ಗ್ರಾಮೀಣ ಯುವಕ ಸಂಘ ಕೊಣಾಜೆ ವತಿಯಿಂದ ಗಾಂಧಿ ಜಯಂತಿ

ಕೊಣಾಜೆ, ಅ. 2: ಮಂಗಳ ಗ್ರಾಮೀಣ ಯುವಕ ಸಂಘ ಕೊಣಾಜೆ ಇದರ ವತಿಯಿಂದ ಇಂದು ಗಾಂಧಿ ಜಯಂತಿ ಪ್ರಯುಕ್ತ ಇಂದು ಬೆಳಗ್ಗೆ ಮಂಗಳ ಗ್ರಾಮೀಣ ಯುವಕ ಸಂಘದ ಬಳಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಮಂಗಳ ಗ್ರಾಮೀಣ ಯುವಕ ಸಂಘದ ಅಧ್ಯಕ್ಷರು, ಪದಾಧಿಕಾರಿಗಳ ಸಹಿತ ಹಲವು ಸದಸ್ಯರು ಭಾಗವಹಿಸಿದ್ದರು. ಪರಿಸರ ಸ್ವಚ್ಛ ಗೊಳಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು ಎಂದು ಪದಾಧಿಕಾರಿಗಳು ತಿಳಿಸಿದ್ದಾರೆ.
Next Story





