Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮುಂದಿನ ಮಾರ್ಚ್ ಅಂತ್ಯದೊಳಗೆ ರಾಜ್ಯ ಬಯಲು...

ಮುಂದಿನ ಮಾರ್ಚ್ ಅಂತ್ಯದೊಳಗೆ ರಾಜ್ಯ ಬಯಲು ಬಹಿರ್ದೆಸೆ ಮುಕ್ತ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ2 Oct 2017 7:14 PM IST
share
ಮುಂದಿನ ಮಾರ್ಚ್ ಅಂತ್ಯದೊಳಗೆ ರಾಜ್ಯ ಬಯಲು ಬಹಿರ್ದೆಸೆ ಮುಕ್ತ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಅ. 2: ಮುಂದಿನ ಮಾರ್ಚ್ ತಿಂಗಳ ಅಂತ್ಯದೊಳಗೆ ಇಡೀ ರಾಜ್ಯವನ್ನು ಬಯಲು ಬಹಿರ್ದೆಸೆ ಮುಕ್ತಗೊಳಿಸಲು ರಾಜ್ಯ ಸರಕಾರ ದೃಢಸಂಕಲ್ಪ ತೊಟ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಗಾಂಧಿ ಜಯಂತಿ ಅಂಗವಾಗಿ ಸೋಮವಾರ ನಗರದ ಅರಮನೆ ಮೈದಾನದಲ್ಲಿರುವ ತ್ರಿಪುರವಾಸಿನಿಯಲ್ಲಿ ಆಯೋಜಿಸಿದ್ದ 1,937 ಗ್ರಾಮ ಪಂಚಾಯತ್ ಬಯಲು ಬಹಿರ್ದೆಸೆ ಮುಕ್ತ ಘೋಷಣೆ ಹಾಗೂ ಗಾಂಧಿ ಗ್ರಾಮ ಪುರಸ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,  ಸ್ವತಃ ಶೌಚಾಲಯ ನಿರ್ಮಿಸಿ, ಬಳಸಿ ನಿರ್ಮಲವಾಗಿಟ್ಟುಕೊಳ್ಳದವರು ಸ್ವಾತಂತ್ರ ಅನುಭವಿಸಲು ಸಾಧ್ಯವಿಲ್ಲ ಎಂದು ಗಾಂಧೀಜಿ ಹೇಳಿದ್ದರು. ಗ್ರಾಮೀಣ ಪ್ರದೇಶದಲ್ಲಿ ಬಯಲು ಬಹಿರ್ದೆಸೆ ಇನ್ನೂ ಇದೆ. ಪುರುಷರ ಕತೆ ಹೇಗೋ ಸಾಗುತ್ತದೆ. ಆದರೆ ಮಹಿಳೆಯರು ಸೂರ್ಯ ಮುಳುಗಲು ಕಾಯುವಂತ ಅವಮಾನವೀಯ ಪರಿಸ್ಥಿತಿ ಇದೆ ಇದು ಹೆಣ್ಣು ಮಕ್ಕಳ ಪಾಲಿಗೆ ಶಾಪ. ಹೀಗಾಗಿ ರಾಜ್ಯದಲ್ಲಿ ಶೌಚಾಲಯ ನಿರ್ಮಾಣಕ್ಕೆ ರಾಜ್ಯ ಸರಕಾರ ಸಮರ ಸಾರಿದೆ ಎಂದು ಹೇಳಿದರು.

ಇದುವರೆಗೂ ರಾಜ್ಯದಲ್ಲಿ ಒಟ್ಟು 31,60,000 ವೈಯಕ್ತಿಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ. 2018ರ ಮಾರ್ಚ್ ಅಂತ್ಯದೊಳಗೆ ರಾಜ್ಯವನ್ನು ಬಯಲು ಬಹಿರ್ದೆಸೆ ಮುಕ್ತಗೊಳಿಸುವ ಸರಕಾರದ ಗುರಿಯನ್ನು ಸಕಾರಗೊಳಿಸಲು ಪಂಚಾಯತ್ ಸಿಬ್ಬಂದಿ, ಸಾರ್ವಜನಿಕರ ಸಹಕಾರ ಅಗತ್ಯ. ಶೌಚಾಲಯ ನಿರ್ಮಾಣದಲ್ಲಿ ಹಿಂದೆ ಬಿದ್ದಿರುವ ಜಿಲ್ಲೆಗಳಲ್ಲಿ ಹೆಚ್ಚು ಆಸಕ್ತಿ ವಹಿಸಿ ಬಯಲು ಬಹಿರ್ದೆಸೆ ಮುಕ್ತಗೊಳಿಸಲು ಶ್ರಮಿಸಬೇಕು ಎಂದು ಕರೆ ನೀಡಿದರು.

ವೇತನ ಹೆಚ್ಚಳಕ್ಕೆ ಚಿಂತನೆ: ಜಿಲ್ಲಾ ಪಂಚಾಯತ್ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಅವರ ಗೌರವಧನವನ್ನು ಹೆಚ್ಚಿಸಲಾಗಿದೆ. ಎಲ್ಲ ಗ್ರಾಮ ಪಂಚಾಯತ್ ಸಿಬ್ಬಂದಿಗೆ ವೇತನ ಹೆಚ್ಚಳಕ್ಕೆ ಸರಕಾರ ಗಂಭೀರ ಚಿಂತನೆ ನಡೆಸಿದೆ. ಸದ್ಯದಲ್ಲೇ ಈ ಕುರಿತು ತೀರ್ಮಾನವನ್ನು ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಚೆಲುವ ಕನ್ನಡ ನಾಡು ಕಟ್ಟೋಣ: ಬ್ರಿಡ್ಜ್ ನಿರ್ಮಾಣ, ಬುಲೆಟ್ ಟ್ರೈನ್ ತರುವುದರಿಂದ ದೇಶ ಕಟ್ಟಲು ಆಗುವುದಿಲ್ಲ. ರಾಜ್ಯದಲ್ಲಿ ತೀರ ಹಿಂದೆ ಬಿದ್ದಿದ್ದ ಕೊಪ್ಪಳ ಜಿಲ್ಲೆಯಲ್ಲಿ ಮಿಷನ್ 200 ಯೋಜನೆಯಡಿ ಒಟ್ಟು 200 ಗಂಟೆಯಲ್ಲಿ 21,124 ಶೌಚಾಲಯಗಳನ್ನು ನಿರ್ಮಿಸಿ ದೇಶಕ್ಕೆ ಮಾದರಿ ಆಗಿದ್ದಾರೆ. ರಾಜ್ಯವನ್ನು ಬಯಲು ಬಹಿರ್ದೆಸೆ ಮುಕ್ತಗೊಳಿಸಲು ಜನರು ಸಹಕಾರ ಅಗತ್ಯ. ಜನರಲ್ಲಿ ಶೌಚಾಲಯ ಕಟ್ಟಿ ಬಳಸುವ ಸದ್ಬುದ್ಧಿಬೇಕು. ಪ್ರತಿಯೊಬ್ಬರು ಶೌಚಾಲಯವನ್ನು ನಿರ್ಮಿಸಿ, ಬಳಸುವ ಮೂಲಕ ಚೆಲುವ ಕನ್ನಡ ನಾಡನ್ನು ಕಟ್ಟಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ಹೇಳಿದರು.

ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯಕ್ರಮಗಳು ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಆರು ಸಾವಿರ ಗ್ರಾಮಪಂಚಾಯತ್ ಗಳಲ್ಲಿ ನಾಲ್ಕು ವರ್ಷಗಳಲ್ಲಿ ಒಟ್ಟು 80 ಸಾವಿರ ಗ್ರಾಮಸಭೆಗಳನ್ನು ನಡೆಸಿ ಜನರ ವಿಶ್ವಾಸಗಳಿಸಲಾಗಿದೆ ಎಂದರು.

ಪಂಚಾಯಿತಿ ಅಭಿವೃದ್ಧಿ ನೌಕರರು ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ನಗರ ಸಭೆಗಳಲ್ಲಿ ಸಿಬ್ಬಂದಿಗಳಿಗೆ ನಿಗದಿಪಡಿಸಿರುವ ಕನಿಷ್ಠ ವೇತನವನ್ನು ಪಂಚಾಯತ್ ನೌಕರರಿಗೂ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

1,937 ಗ್ರಾಮ ಬಯಲು ಬಹಿರ್ದೆಸೆ ಮುಕ್ತ: ಈ ವರ್ಷದಲ್ಲಿ ಹಾಸನ, ಮಂಡ್ಯ, ಚಿಕ್ಕಮಗಳೂರು, ರಾಮನಗರ, ಶಿವಮೊಗ್ಗ, ಕೋಲಾರ ಜಿಲ್ಲೆಗಳನ್ನು ಬಯಲು ಬಹಿರ್ದೆಸೆ ಮುಕ್ತಗೊಳಿಸಲಾಗಿದೆ. ಇದರಲ್ಲಿ 51 ತಾಲೂಕುಗಳು ಒಟ್ಟು 1,937 ಗ್ರಾಮ ಪಂಚಾಯತ್ ಗಳ 10,340 ಹಳ್ಳಿಗಳ 1.75 ಕೋಟಿ ಜನ ಬಯಲು ಬಹಿರ್ದೆಸೆ ಮುಕ್ತರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಗ್ರಾಮಗಳ ಅಭಿವೃದ್ಧಿಗಾಗಿ ಶ್ರಮಿಸಿದ 176 ತಾಲೂಕುಗಳಲ್ಲಿ ತಲಾ ಒಂದು ಗ್ರಾಮ ಪಂಚಾಯತ್ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಪಾತ್ರವಾದವು. ಪ್ರಶಸ್ತಿಯನ್ನು ಗ್ರಾಮ ಪಂಚಾಯತ್ ಅಧಿಕಾರಿ ಹಾಗೂ ಪಂಚಾಯತ್ ಅಧ್ಯಕ್ಷರಿಗೆ ಪ್ರದಾನಿಸಲಾಯಿತು. ಪ್ರಶಸ್ತಿಯು ತಲಾ 5 ಲಕ್ಷ ನಗದು, ಫಲಕಗಳನ್ನು ಒಳಗೊಂಡಿವೆ. ಗಾಂಧಿ ಗ್ರಾಮ ಪುರಸ್ಕಾರಕ್ಕಾಗಿ ರಾಜ್ಯ ಸರಕಾರ ಕಳೆದ ಬಜೆಟ್‌ನಲ್ಲಿ ಸುಮಾರು 8 ಕೋಟಿ ರೂಗಳ ಅನುದಾನವನ್ನು ಮೀಸಲಿಡಲಾಗಿತ್ತು ಎಂದು ಅವರು ಹೇಳಿದರು.

ಈ ವೇಳೆ ಶೌಚಾಲಯ ನಿರ್ಮಾಣದಲ್ಲಿ ಗಣನೀಯ ಸೇವೆ ಸಲ್ಲಿಸಿದವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಸಚಿವ ಆರ್.ರೋಷನ್ ಬೇಗ್, ಮಾಜಿ ಸಂಸದ ಸಿ.ನಾರಾಯಣಸ್ವಾಮಿ, ಸುಲಭ್ ಇಂಟರ್ ನ್ಯಾಷನಲ್ ಸಂಸ್ಥೆಯ ಸಂಸ್ಥಾಪಕ ಡಾ.ಬಿಂದೇಶ್ವರ್ ಪಾಠಕ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎನ್.ನಾಗಾಂಬಿಕಾ ದೇವಿ, ಅಪರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸೇರಿದಂತೆ ಇತರರು ಇದ್ದರು.

2018ರ ಮಾರ್ಚ್ ತಿಂಗಳ ಅಂತ್ಯದೊಳಗೆ ರಾಜ್ಯವನ್ನು ಬಯಲು ಬಹಿರ್ದೆಸೆ ಮುಕ್ತಗೊಳಿಸುವ ಗುರಿ ಮುಟ್ಟಲು ಕೇಂದ್ರ ಸರಕಾರದಿಂದ ಬರಬೇಕಿರುವ ಎರಡು ಸಾವಿರ ಕೋಟಿ ರೂ.ಗಳ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು.
-ಎಚ್.ಕೆ.ಪಾಟೀಲ್,ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ

ಶುಚಿತ್ವ ದೈವತ್ವದ ಪ್ರತಿರೂಪ. ಗಾಂಧೀಜಿ ಅವರ ಸ್ವಚ್ಛ ಭಾರತ್ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಸಿರುವ ಕರ್ನಾಟಕ ಸರಕಾರ ಇತರೆ ರಾಜ್ಯಗಳಿಗೆ ಮಾದರಿ.
-ಮಣಿಶಂಕರ್ ಅಯ್ಯರ್,

share
ವಾರ್ತಾಭಾರತಿ
ವಾರ್ತಾಭಾರತಿ
Next Story
X