Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಮಹಿಳೆ-ದಲಿತತ್ವ ಮತ್ತು ರಾಜಕೀಯ ಪ್ರಜ್ಞೆ

ಮಹಿಳೆ-ದಲಿತತ್ವ ಮತ್ತು ರಾಜಕೀಯ ಪ್ರಜ್ಞೆ

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯ-ಕಾರುಣ್ಯ3 Oct 2017 12:14 AM IST
share
ಮಹಿಳೆ-ದಲಿತತ್ವ ಮತ್ತು ರಾಜಕೀಯ ಪ್ರಜ್ಞೆ

​‘ಮಹಿಳೆ-ದಲಿತತ್ವ ಮತ್ತು ರಾಜಕೀಯ ಪ್ರಜ್ಞೆ’ ಕೃತಿ ಡಾ. ಎಚ್. ಎಸ್. ಅನುಪಮಾ ಅವರು ಸ್ತ್ರೀಯನ್ನು ಕೇಂದ್ರವಾಗಿಟ್ಟುಕೊಂಡು ಸಮಾಜವನ್ನು ಚರ್ಚಿಸಿದ್ದಾರೆ. ಈ ಕೃತಿಯಲ್ಲಿ ಮಹಿಳಾ ಚಳವಳಿಯ ಅಂಚನ್ನು ವಿಸ್ತರಿಸುವ ಅನೇಕ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಅರ್ಥ ಸಾಧ್ಯತೆಯನ್ನು ವೌನವಾಗಿ, ಅಷ್ಟೇ ಸೂಕ್ಷ್ಮವಾಗಿ ಗ್ರಹಿಸುವ ಅನುಪಮಾ, ಕವಿಯಾಗಿರುವುದರಿಂದಲೇ ಈ ಸಂಗತಿಗಳನ್ನು ರೂಪಕ ಭಾಷೆಯಲ್ಲಿ ಕಟ್ಟಿಕೊಡುತ್ತಾ ಹೋಗಿದ್ದಾರೆ. ಮಹಿಳಾ ಚಳವಳಿಗೆ ಬೇಕಾಗಿರುವ ಸಮತೋಲನ, ತಾತ್ವಿಕತೆ, ಅದು ವಿಸ್ತರಿಸಿಕೊಳ್ಳಬೇಕಾದ ಬಗೆಗಳನ್ನು ತಾಯಿ ಭಾಷೆಯ ಕಾಳಜಿಯಿಂದ ನಿರೂಪಿಸಿದ್ದಾರೆ. ಇದು ಒಂದು ಸುದೀರ್ಘ ಲೇಖನ ಅಥವಾ ಚಿಂತನೆಯಲ್ಲ. ಬೇರೆ ವ್ಯಕ್ತಿ, ವ್ಯಕಿತ್ವಗಳನ್ನು, ಪ್ರಕರಣಗಳನ್ನು ಇಟ್ಟುಕೊಂಡು ಮಹಿಳೆಯ ಹಿಂದು, ಇಂದು, ಮುಂದುಗಳನ್ನು ಲೇಖನದಲ್ಲಿ ಚರ್ಚಿಸಿದ್ದಾರೆ. ಈ ಕೃತಿಯೊಳಗೆ ಕರಾವಳಿಯ ಹಾಡುಹಕ್ಕಿ ಸುಕ್ರಿ ಬೊಮ್ಮ ಗೌಡ ಇದ್ದಾರೆ. ಕಾಳುಮೆಣಸಿನ ರಾಣಿ ಚೆನ್ನಭೈರಾದೇವಿಯನ್ನು ನೋಡಬಹುದು. ಆಂಗ್ ಸಾನ್ ಸೂಕಿಯನ್ನು ಕಾಣಬಹುದು. ಮೊತ್ತ ಮೊದಲ ಸಾಮ್ರಾಜ್ಞಿಯ ಕತೆಯಿದೆ. ಏಂಜೆಲಾ ಡೇವಿಸ್ ಮೊದಲಾದವರ ಬದುಕು ವ್ಯಕ್ತಿತ್ವಗಳ ಮೂಲಕ ಮಹಿಳೆ ಎದುರಿಸಬೇಕಾದ ಒಳಹೊರಗಿನ ಸವಾಲುಗಳ ಬಗ್ಗೆ ವಿವರಿಸುತ್ತಾರೆ. ಸ್ತ್ರೀವಾದಿ ಬರಹಗಳಾಚೆಗೆ, ಪುರುಷರನ್ನೂ ಜೊತೆ ಸೇರಿಸಿಕೊಂಡು ಅವರು ಇಲ್ಲಿ ಮಹಿಳೆಯನ್ನು ನಿರೂಪಿಸುವುದನ್ನು ಕಾಣಬಹುದು. ಯಾವುದೇ ಅಧ್ಯಯನೀಯ ಶಿಸ್ತಿನಿಂದ ರೂಪುಗೊಂಡಿರುವ ಕೃತಿ ಇದಲ್ಲ. ಲೇಖಕಿಯೇ ಹೇಳುವಂತೆ ಕಾಲ, ಸಂದರ್ಭಕ್ಕೆ ತಕ್ಕಂತೆ ಬರೆದವುಗಳು. ಉಮಾಚಕ್ರವರ್ತಿಯವರ ಜೆಂಡರಿಂಗ್ ಕ್ಯಾಸ್ಟ್ ಇಲ್ಲಿ ಸಂಗ್ರಹರೂಪದಲ್ಲಿ ಮೂಡಿ ಬಂದಿದೆ. ಈ ಬರಹವಲ್ಲದೆ ಈ ಪುಸ್ತಕದಲ್ಲಿ 3500 ವರ್ಷಗಳ ಕೆಳಗೆ ಈಜಿಪ್ಟ್ ಅನ್ನು ಆಳಿದ ಹಟ್ಸೆಪ್ಸಿಟುವಿನಿಂದ ಹಿಡಿದು ಸುಕ್ರಿಯಂಥ ಹಿರಿಯ ಜನಪದ ಹಾಡುಗಾರ್ತಿಯ ತನಕ, ಚೆನ್ನಭೈರಾದೇವಿಯೆಂಬ ದಿಟ್ಟೆ ರಾಣಿಯಿಂದ ಹಿಡಿದು ಲಾಲ್ ಫೇರಿಯಂತಹ ನಿರಾಶ್ರಿತಳ ತನಕ ಕೆಲವು ಮಹಿಳಾ ಚೇತನಗಳು ಸುಳಿದು ಹೋಗುತ್ತವೆ. ಲಡಾಯಿ ಪ್ರಕಾಶನ ಗದಗ ಈ ಕೃತಿಯನ್ನು ಹೊರತಂದಿದೆ. 160 ಪುಟಗಳ ಈ ಕೃತಿಯ ಮುಖಬೆಲೆ 120 ರೂ. ಆಸಕ್ತರು 94802 86844 ದೂರವಾಣಿಯನ್ನು ಸಂಪರ್ಕಿಸಬಹುದು.

share
-ಕಾರುಣ್ಯ
-ಕಾರುಣ್ಯ
Next Story
X