Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಧಾರಾಕಾರ ಮಳೆಗೆ ದಾವಣಗೆರೆ ತತ್ತರ

ಧಾರಾಕಾರ ಮಳೆಗೆ ದಾವಣಗೆರೆ ತತ್ತರ

ಜನ ಜೀವನ ಅಸ್ತವ್ಯಸ್ತ

ವಾರ್ತಾಭಾರತಿವಾರ್ತಾಭಾರತಿ3 Oct 2017 6:17 PM IST
share
ಧಾರಾಕಾರ ಮಳೆಗೆ ದಾವಣಗೆರೆ ತತ್ತರ

ದಾವಣಗೆರೆ, ಅ.3: ಸೋಮವಾರ ರಾತ್ರಿ ದೇವನಗರಿಯಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಅಲ್ಲಿನ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. 

ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದಲ್ಲದೆ, ಕೆರೆಕಟ್ಟೆಗಳಲ್ಲಿ ಮಳೆ ನೀರು ತುಂಬಿ ಹುಕ್ಕಿ ಹರಿದವು. 
ರಾತ್ರಿ 8 ಗಂಟೆಗೆ ಆರಂಭವಾದ ಮಳೆ ಸತತ 8 ತಾಸು ಎಡೆಬಿಡದೇ ಸುರಿಯಿತು. ಮಳೆ ಸುರಿದಂತೆಲ್ಲಾ ಗುಡುಗು, ಮಿಂಚು, ಸಿಡಿಲಿನ ಅಬ್ಬರದಿಂದಾಗಿ ಮಳೆಯ ರುದ್ರ ನರ್ತನಕ್ಕೆ ನಗರ, ಪಟ್ಟಣ, ಗ್ರಾಮೀಣ ಜನರು ಕಂಗಾಲಾದರು. ರಾತ್ರೋರಾತ್ರಿ ಸುರಿಯುತ್ತಿರುವ ಮಳೆಯಿಂದಾಗಿ ಸಾವಿರಾರು ಹೆಕ್ಟೇರ್‍ನ ಹೊಲ, ಗದ್ದೆಗಳು ಜಲಾವೃತವಾಗಿದ್ದು, ಸಾಗರೋಪಾದಿಯಲ್ಲಿ ಮಳೆ ನೀರು ಹಳ್ಳ, ಕೊಳ್ಳ, ಚೆಕ್ ಡ್ಯಾಂಗಳಲ್ಲಿ ತುಂಬಿ ಹರಿಯುತ್ತಿವೆ. ಕೆರೆಗಳು ತುಂಬಿ ಕೋಡಿ ಬಿದ್ದುಹರಿಯುತ್ತಿವೆ.

ಭಾರೀ ಮಳೆಯಿಂದಾಗಿ ನಗರದ ಬಹುತೇಕ ತಗ್ಗು ಪ್ರದೇಶಗಳು, ರಾಜ ಕಾಲುವೆ ಸುತ್ತಲಿನ ಪ್ರದೇಶ, ಕೊಳಗೇರಿಗಳು, ಆಶ್ರಯ ಕಾಲನಿಗಳು, ಹೊಸ ಬಡಾವಣೆಗಳು ರಾತ್ರೋರಾತ್ರಿ ಜಲಾವೃತವಾದ ಪರಿಣಾಮ ಜನರು ತೀವ್ರವಾಗಿ ಪರದಾಡಬೇಕಾಯಿತು. ಅಲ್ಲದೆ, ಇಲ್ಲಿನ ಸರಸ್ವತಿ ಬಡಾವಣೆ, ಜಯ ನಗರ, ನಿಟುವಳ್ಳಿ ಕರಿಯಮ್ಮ ದೇವಸ್ಥಾನ, ಶಿವಕುಮಾರ ಸ್ವಾಮಿ ಬಡಾವಣೆ, ಬನಶಂಕರಿ ಬಡಾವಣೆ, ವಿದ್ಯಾನಗರ, ಆಜಾದ್ ನಗರ, ನೀಲಮ್ಮನ ತೋಟ, ಭಾರತ ಕಾಲನಿ, ಚಿಕ್ಕನಹಳ್ಳಿ, ಬಸಾಪುರ, ಬಾಷಾ ನಗರ, ಗಾಂಧಿ ನಗರ, ಆಶ್ರಯ ಕಾಲನಿಗಳು ಸಂಪೂರ್ಣ ಜಲಾವೃತವಾಗಿದ್ದವು. ಕುಂದುವಾಡ, ಶಾಬನೂರು, ನಾಗನೂರು, ಜರೀಕಟ್ಟೆ, ಬೇತೂರು, ಮಾಗಾನಹಳ್ಳಿ, ಯರಗುಂಟೆ ಭಾಗವೂ ಜಲಾವೃತವಾಗಿದ್ದರಿಂದ ರಾತ್ರಿ ಪೂರ್ತಿ ಜನ  ತೊಂದರೆಗೀಡಾದರು.

ಅಗ್ನಿ ಶಾಮಕ ಇಲಾಖೆ ಆವರಣ ಸಂಪೂರ್ಣ ನೀರಿನಿಂದ ಆವೃತವಾಗಿದ್ದು, ನೀರನ್ನು ಹೊರಹಾಕಲು ಸಿಬ್ಬಂದಿಗಳು ನಾಲ್ಕು ಅಗ್ನಿಶಾಮಕ ವಾಹನ ಬಳಕೆ ಮಾಡಿಕೊಂಡಿದ್ದರು. ಹೊಸ ಬಸ್ ನಿಲ್ದಾಣ ಸುತ್ತಮುತ್ತಲಿನ ಪ್ರದೇಶ ಜಲಮಯವಾಗಿತ್ತು. ಇದೇ ಪಿಬಿ ರಸ್ತೆಗೆ ಹೊಂದಿಕೊಂಡಿರುವ ಅಗ್ನಿಶಾಮಕ ದಳದ ಕಚೇರಿ ಪ್ರದೇಶ, ಕ್ವಾಟ್ರರ್ಸ್ ಸಂಪೂರ್ಣವಾಗಿ ಜಲಾವೃತವಾಗಿದ್ದವು. 

ಬೇತೂರು ಹಳ್ಳಕ್ಕೆ ಕಟ್ಟಲಾದ ಸೇತುವೆ ಮೇಲೆ ನೀರು ಹರಿಯುತ್ತಿರುವುದರಿಂದ ದಾವಣಗೆರೆ- ಹರಪನಹಳ್ಳಿ ಸಂಪರ್ಕ ಕಡಿತವಾಗಿತ್ತು. ಬಸ್ ಚಾಲಕರು ಸಂಚರಿಸಲು ದುಸ್ಸಾಹಸಪಟ್ಟರು. ರಸ್ತೆ ಸಂಚಾರ ಸ್ಥಗಿತ ಹಿನ್ನೆಲೆಯಲ್ಲಿ ನೂರಾರು ವಾಹನಗಳು ಸಾಲು ಸೇತುವೆ ಎರಡು ಬದಿ ನಿಂತಿದ್ದವು. 

ಮೇಯರ್ ಭೇಟಿ: ಮೇಯರ್ ಅನಿತಾಬಾಯಿ ಅವರು ಜಧವ್ ನಗರದ ಬೂದಿಹಾಳ್ ರಸ್ತೆ ಸೇರಿದಂತೆ ಕೆಲ ಪ್ರದೇಶಕ್ಕೆ ಭೇಟಿ ನೀಡಿ, ಮಳೆಯಿಂದ ಹಾನಿಯಾದ ಕುರಿತು ಮಾಹಿತಿ ಕಲೆಹಾಕಿ, ಅಗತ್ಯವಿರುವ ಕಡೆ ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಳೆದ ನಾಲ್ಕು ದಿನಗಳ ಹಿಂದೆ ಸುರಿದ ಭಾರೀ ಮಳೆಗೆ ದಾವಣಗೆರೆ ನಗರದಲ್ಲಿ ಸುಮಾರು 63 ಕೋಟಿ ರೂ. ಮೌಲ್ಯ ದ ಆಸ್ತಿ ಪಾಸ್ತಿ ಹಾನಿಯಾಗಿದೆ. ಪಾಲಿಕೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ತೀವ್ರ ತೊಂದರೆ ಆಗಿರುವ ಜನಕ್ಕೆ ತಕ್ಷಣ ಪರಿಹಾರ ನೀಡಲಾಗುವುದು ಎಂದು ಇದೇ ವೇಳೆ ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X