ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಉಡುಪಿ, ಅ.3: ಜಮೀಯ್ಯತುಲ್ ಫಲಾಹ್ ಉಡುಪಿ ಘಟಕದ ವತಿ ಯಿಂದ ಉಡುಪಿ ತಾಲೂಕಿನ ಆರ್ಥಿಕವಾಗಿ ಹಿಂದುಳಿದ(ಝಕಾತ್ ಪಡೆ ಯಲು ಅರ್ಹ) ಕುಟುಂಬದ 2017-18ನೆ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯಲ್ಲಿ ಹೆಸರು, ವ್ಯಾಸಂಗ ಮಾಡುತ್ತಿರುವ ತರಗತಿ, ವಿಳಾಸ ಹಾಗೂ ಮೊಬೈಲ್ ನಂಬರ್‌ಗಳನ್ನು ಬರೆದು ಅ.15ರೊಳಗೆ ಸಾಮಾನ್ಯ ಅಂಚೆ ಮೂಲಕ ಜಮೀಯ್ಯುತುಲ್ ಫಲಾಹ್ ಉಡುಪಿ ಘಟಕ, ವಿಶ್ವಾಸ್ ಟವರ್ಸ್, ಮೊದಲನೆ ಮಹಡಿ, ಕೋರ್ಟ್ ಹಿಂಬದಿ ರಸ್ತೆ, ಉಡುಪಿ 576101 ಈ ವಿಳಾಸಕ್ಕೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ-9880370037, 9900253105, 9880573127ಕ್ಕೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Next Story





