Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕರುಣಾಕರ ರೆಡ್ಡಿ ಗೆಲುವಿಗೆ ಮತದಾರರಿಂದ...

ಕರುಣಾಕರ ರೆಡ್ಡಿ ಗೆಲುವಿಗೆ ಮತದಾರರಿಂದ ಪ್ರಮಾಣ ಮಾಡಿಸಿದ ಬಿಜೆಪಿ ಮುಖಂಡ!

ವಾರ್ತಾಭಾರತಿವಾರ್ತಾಭಾರತಿ3 Oct 2017 9:36 PM IST
share
ಕರುಣಾಕರ ರೆಡ್ಡಿ ಗೆಲುವಿಗೆ ಮತದಾರರಿಂದ ಪ್ರಮಾಣ ಮಾಡಿಸಿದ ಬಿಜೆಪಿ ಮುಖಂಡ!

ಬಳ್ಳಾರಿ, ಅ. 3: ‘2018ರ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಹರಪ್ಪನಹಳ್ಳಿ ಕ್ಷೇತ್ರದಿಂದ ಕಣಕ್ಕಿಳಿರುವ ಮಾಜಿ ಸಚಿವ ಕರುಣಾಕರ ರೆಡ್ಡಿ ಅವರಿಗೆ ತಮ್ಮ ಮತ ನೀಡುವ ಮೂಲಕ ಆಯ್ಕೆ ಮಾಡುತ್ತೇವೆ’ ಎಂದು ಕರುಣಾಕರ ರೆಡ್ಡಿ ಸಮ್ಮುಖದಲ್ಲೆ ಉಪ್ಪಾರ ಸಮುದಾಯದಿಂದ ಆಣೆ-ಪ್ರಮಾಣ ಮಾಡಿಸಿದ ಘಟನೆ ವರದಿಯಾಗಿದೆ.

ಮಂಗಳವಾರ ಇಲ್ಲಿನ ಸಿರುಗುಪ್ಪ ರಸ್ತೆಯಲ್ಲಿನ ಕರುಣಾಕರ ರೆಡ್ಡಿ ನಿವಾಸದಲ್ಲಿ ಕ್ಷೇತ್ರದ ಉಪ್ಪಾರ ಸಮುದಾಯದ ಮುಖಂಡರ ಸಭೆ ನಡೆಸಿದರು. ಈ ವೇಳೆ ರೆಡ್ಡಿ ಸಮ್ಮುಖದಲ್ಲಿ ಬಿಜೆಪಿ ಮುಖಂಡರೊಬ್ಬರು, ಉಪ್ಪಾರ ಸಮುದಾಯದವರಿಂದ ಮುಂಬರುವ ಚುನಾವಣೆಯಲ್ಲಿ ಕರುಣಾಕರ ರೆಡ್ಡಿ ಅವರನ್ನು ಗೆಲ್ಲಿಸುತ್ತೇವೆ ಎಂದು ಆಣೆ ಮಾಡಿಸಿರುವುದನ್ನು ಖಾಸಗಿ ಸುದ್ದಿವಾಹಿನಿಯೊಂದು ವರದಿ ಮಾಡಿದೆ.

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎರಡು ತಿಂಗಳಿಂದ ಕರುಣಾಕರ ರೆಡ್ಡಿ ಕ್ಷೇತ್ರದ ಎಲ್ಲ ಸಮುದಾಯದ ಮುಖಂಡರನ್ನು ತನ್ನ ನಿವಾಸಕ್ಕೆ ಕರೆಸಿಕೊಂಡು ಸಭೆ-ಸಮಾರಂಭಗಳನ್ನು ನಡೆಸುವುದು ಸಹಜ. ಆದರೆ, ಇದೀಗ ಆಣೆ ಮಾಡಿಸಿರುವುದು ತೀವ್ರ ವಿವಾದಕ್ಕೆ ಗ್ರಾಸವಾಗಿದೆ.

ಜೀವ ಇರುವವರೆಗೂ ಜನಸೇವೆ: ನಾನು ಶಾಸಕನಾಗಿ, ಸಚಿವನಾಗಿ ನನ್ನ ಕ್ಷೇತ್ರಕ್ಕೆ ಮಾಡಿದ ಸೇವೆ ಪರಿಗಣಿಸಿ ಸ್ವ ಇಚ್ಛೆಯಿಂದ ನನ್ನ ಮನೆಗೆ ಆಗಮಿಸಿ ಬೆಂಬಲ ಸೂಚಿಸುತ್ತಿರುವ ಹರಪನಹಳ್ಳಿ ಕ್ಷೇತ್ರದ ಜನತೆಗೆ ನನ್ನ ಜೀವ ಇರುವವರೆಗೂ ಸೇವೆ ಸಲ್ಲಿಸುತ್ತೇನೆ ಎಂದು ಕರುಣಾಕರರೆಡ್ಡಿ ಇದೇ ವೇಳೆ ಘೋಷಿಸಿದರು.

ಈ ವೇಳೆ ಮಾತನಾಡಿದ ಅವರು, ಭಗೀರಥನನ್ನು ನೆನೆಸಿಕೊಂಡು ನೀವೆಲ್ಲಾ ಬಂದಿದ್ದೀರಿ. ಯಾವುದೇ ಸುದೀರ್ಘ ಪ್ರಯತ್ನ ನಡೆಸಿದರೆ ಅದನ್ನು ಭಗೀರಥ ಪ್ರಯತ್ನ ಎಂದೇ ಕರೆಯುವ ರೂಢಿ ಇದೆ. ಗಂಗಾನದಿ ಭಗೀರಥನಿಂದಾಗಿಯೇ ಇಂದಿಗೂ ಪಾವಿತ್ರ್ಯತೆ ಪಡೆದಿದೆ. ಅದೇರೀತಿ, ನೀವೆಲ್ಲರೂ ಆಗಮಿಸಿ ನನ್ನನ್ನು ಬೆಂಬಲಸಿದ್ದೀರಿ. ನಿಮ್ಮೆಲ್ಲರ ಪ್ರೀತಿ ಗಮನಿಸಿದರೆ ನಾನು ಕಳೆದ ಜನ್ಮದಲ್ಲಿ ಬಹುಶಃ ಹರಪನಹಳ್ಳಿ ಕ್ಷೇತ್ರದ ಜನರ ವಿಶ್ವಾಸಕ್ಕೆ ಪಾತ್ರನಾಗಿರಬೇಕೆನಿಸುತ್ತದೆ ಎಂದು ಸ್ಮರಿಸಿದರು.

ಕ್ಷೇತ್ರದ ಎಲ್ಲ ಸಮುದಾಯದ ಜನರ ಪ್ರೀತಿ ಪಡೆದಿರುವುದು ನಿಜಕ್ಕೂ ಇನ್ನಷ್ಟು ಜವಾಬ್ದಾರಿ ಹೆಚ್ಚಿದೆ. ಕಳೆದ ಬಾರಿ ಶಾಸಕನಾಗಿದ್ದಾಗ 60 ಕೆರೆಗಳಿಗೆ ನೀರು ತುಂಬಿಸುವ ಕೆಲಸಕ್ಕೆ ಆದ್ಯತೆ ನೀಡಿದ್ದೆ. ಎಸ್ಸಿ-ಎಸ್ಟಿ ಕಾಲನಿಗಳಲ್ಲಿ ರಸ್ತೆ, ಸಮುದಾಯ ಭವನಗಳ ನಿರ್ಮಾಣಕ್ಕೆ ಮಾಡಲಾಗಿತ್ತು ಎಂದು ತಮ್ಮ ಅಭಿವೃದ್ಧಿ ಕಾರ್ಯಗಳನ್ನು ನೆನಪಿಸಿದರು.

ಹರಪನಹಳ್ಳಿ ಕ್ಷೇತ್ರದ ಶಾಸಕ ಎಂ.ಪಿ.ರವೀಂದ್ರ ಹೆಸರಿಗೆ ಮಾತ್ರ ಶಾಸಕರಾಗಿದ್ದು, ಅವರು ಕ್ಷೇತ್ರದ ಯಾವುದೇ ಹಳ್ಳಿಗಳಿಗೆ ಸಂಚರಿಸಿಲ್ಲ. ಸುಳ್ಳು ಹೇಳುವ ಮೂಲಕ ಕಾಲಹರಣ ಮಾಡುತ್ತಿದ್ದಾರೆ. ನನ್ನ ಅವಧಿಯಲ್ಲಿ ಪ್ರಗತಿಯಲ್ಲಿರುವ ಅಭಿವೃದ್ಧಿ ಕೆಲಸಗಳನ್ನು ಪೂರ್ಣಗೊಳಿಸಲು ಅವರಿಂದ ಆಗುತ್ತಿಲ್ಲ. ಹೀಗಾಗಿ ಕಾಂಗ್ರೆಸ್ ಸರಕಾರವನ್ನು ನಂಬಬೇಡಿ ಎಂದು ಕರುಣಾಕರ ರೆಡ್ಡಿ ಕೋರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X