Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜಂಟಿ ಪರಿಶೀಲನಾ ಸಮಿತಿಯಿಂದ ಸ್ಪೀಕರ್‌ಗೆ...

ಜಂಟಿ ಪರಿಶೀಲನಾ ಸಮಿತಿಯಿಂದ ಸ್ಪೀಕರ್‌ಗೆ ವರದಿ ಸಲ್ಲಿಕೆ

ಖಾಸಗಿ ಆಸ್ಪತ್ರೆಗಳಿಗೆ ಕಡಿವಾಣ

ವಾರ್ತಾಭಾರತಿವಾರ್ತಾಭಾರತಿ3 Oct 2017 10:14 PM IST
share

ಬೆಂಗಳೂರು, ಅ.3: ಬಡವರು ಹಾಗೂ ಮಧ್ಯಮ ವರ್ಗದವರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಆಗುವ ಕಿರುಕುಳವನ್ನು ತಪ್ಪಿಸಲು ರಾಜ್ಯ ಸರಕಾರ ಜಾರಿಗೆ ತರಲು ಮುಂದಾಗಿರುವ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ(ತಿದ್ದುಪಡಿ) ವಿಧೇಯಕದ ಕುರಿತು ಜಂಟಿ ಪರಿಶೀಲನಾ ಸಮಿತಿಯು ಸ್ಪೀಕರ್‌ಗೆ ತನ್ನ ವರದಿಯನ್ನು ಸಲ್ಲಿಸಿದೆ.

ಮಂಗಳವಾರ ನಗರದಲ್ಲಿ ಸ್ಪೀಕರ್ ಕೆ.ಬಿ.ಕೋಳಿವಾಡರನ್ನು ಅವರ ನಿವಾಸದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಆರ್.ರಮೇಶ್‌ಕುಮಾರ್ ನೇತೃತ್ವದಲ್ಲಿ ಭೇಟಿ ಮಾಡಿದ ಜಂಟಿ ಪರಿಶೀಲನಾ ಸಮಿತಿಯ ಸದಸ್ಯರು ವರದಿಯನ್ನು ಹಸ್ತಾಂತರಿಸಿದರು.

ಕಳೆದ ವಿಧಾನಮಂಡಲದ ಅಧಿವೇಶನದಲ್ಲಿ ಈ ವಿಧೇಯಕವನ್ನು ಸದನದಲ್ಲಿ ಮಂಡಿಸಲಾಗಿತ್ತು. ಚರ್ಚೆಯಲ್ಲಿ ಪಾಲ್ಗೊಂಡಿದ್ದ ಬಹುತೇಕ ಸದಸ್ಯರು ತರಾತುರಿಯಲ್ಲಿ ಈ ವಿಧೇಯಕವನ್ನು ಅಂಗೀಕರಿಸುವ ಬದಲು ಮತ್ತಷ್ಟು ವಿವರವಾಗಿ ಚರ್ಚಿಸುವ ಅಗತ್ಯವಿದೆ. ಆದುದರಿಂದ, ಜಂಟಿ ಪರಿಶೀಲನಾ ಸಮಿತಿಗೆ ಈ ವಿಧೇಯಕವನ್ನು ಒಪ್ಪಿಸಬೇಕು ಎಂದು ಸ್ಪೀಕರ್‌ಗೆ ಮನವಿ ಸಲ್ಲಿಸಿದ್ದರು. ಅದರಂತೆ, ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಕೆ.ಎನ್.ರಾಜಣ್ಣ ನೇತೃತ್ವದಲ್ಲಿ ವಿಧಾನಸಭೆ ಹಾಗೂ ವಿಧಾನಪರಿಷತ್ತಿನ ಸದಸ್ಯರು ಇರುವ ಜಂಟಿ ಪರಿಶೀಲನಾ ಸಮಿತಿಯನ್ನು ರಚಿಸಿದ ಸ್ಪೀಕರ್, ವಿಧೇಯಕವನ್ನು ಪರಿಶೀಲನೆಗೊಳಪಡಿಸಿ ವರದಿ ನೀಡುವಂತೆ ಸೂಚನೆ ನೀಡಿದ್ದರು.

ಜಂಟಿ ಪರಿಶೀಲನಾ ಸಮಿತಿಯು ಹಲವು ಸಭೆಗಳನ್ನು ನಡೆಸಿ ವಿಧೇಯಕದ ಕುರಿತು ತನ್ನ ವರದಿಯನ್ನು ಸಿದ್ಧಪಡಿಸಿ ಇಂದು ಸ್ಪೀಕರ್‌ಗೆ ಹಸ್ತಾಂತರಿಸಿದೆ. ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲಿ ಈ ವರದಿಯು ಸದನದ ಮುಂದೆ ಬರಲಿದೆ. ಆನಂತರ, ವಿಧೇಯಕಕ್ಕೆ ಅಂಗೀಕಾರ ಸಿಗುವ ಸಾಧ್ಯತೆಗಳಿವೆ.

ಬಡವರನ್ನು ಸುಲಿಗೆ ಮಾಡುವ ಆಸ್ಪತ್ರೆಗಳನ್ನು ನಿಯಂತ್ರಿಸುವ ಮಹತ್ವದ ಹೊಣೆಗಾರಿಕೆ ಈ ವಿಧೇಯಕದಲ್ಲಿ ಅಡಗಿದೆ. ಸರಕಾರದ ಆದೇಶದಂತೆ ಖಾಸಗಿ ಆಸ್ಪತ್ರೆಗಳು ಆರೋಗ್ಯ ಸೇವೆಗಳನ್ನು ಒದಗಿಸಬೇಕು. ಇಲ್ಲದಿದ್ದರೆ, ಕಾನೂನು ರೀತಿ ಕಠಿಣ ಕ್ರಮ ಎದುರಿಸಲು ಸಜ್ಜಾಗಬೇಕಿದೆ.

ಈ ಸಂದರ್ಭದಲ್ಲಿ ಜಂಟಿ ಸದನ ಸಮಿತಿಯ ಸದಸ್ಯರಾದ ಮಾಜಿ ಸಚಿವರಾದ ಡಾ.ಎ.ಬಿ.ಮಾಲಕರೆಡ್ಡಿ, ಪಿ.ಎಂ.ನರೇಂದ್ರಸ್ವಾಮಿ, ವಿಧಾನಪರಿಷತ್ ಸದಸ್ಯ ಪಿ.ಆರ್.ರಮೇಶ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X