Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜಂಟಿ ಪರಿಶೀಲನಾ ಸಮಿತಿ ವರದಿಗೆ ಬಿಜೆಪಿ...

ಜಂಟಿ ಪರಿಶೀಲನಾ ಸಮಿತಿ ವರದಿಗೆ ಬಿಜೆಪಿ ಅಸಹಮತ

ವಾರ್ತಾಭಾರತಿವಾರ್ತಾಭಾರತಿ3 Oct 2017 10:27 PM IST
share

ಬೆಂಗಳೂರು, ಅ.3: ರಾಜ್ಯ ಖಾಸಗಿ ವೈದ್ಯಕೀಯ ಸಂಸ್ಥೆಗಳ(ತಿದ್ದುಪಡಿ) ವಿಧೇಯಕವನ್ನು ಪರಿಶೀಲಿಸಲು ರಚಿಸಲಾಗಿದ್ದ ಜಂಟಿ ಪರಿಶೀಲನಾ ಸಮಿತಿಯು ಸ್ಪೀಕರ್ ಕೆ.ಬಿ.ಕೋಳಿವಾಡಗೆ ಸಲ್ಲಿಸಿರುವ ವರದಿಗೆ ಸಮಿತಿಯ ಬಿಜೆಪಿ ಸದಸ್ಯರು ಅಸಹಮತ ವ್ಯಕ್ತಪಡಿಸಿದ್ದಾರೆ.

ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ, ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಶಾಸಕರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಡಾ.ಅಶ್ವಥ್ ನಾರಾಯಣ್ ಈ ಸಂಬಂಧ ಸ್ಪೀಕರ್ ಕೆ.ಬಿ.ಕೋಳಿವಾಡಗೆ ಪತ್ರ ಬರೆದಿದ್ದಾರೆ.

ಜಂಟಿ ಪರಿಶೀಲನಾ ಸಮಿತಿಯು ಅನೇಕ ಸಭೆಗಳನ್ನು ನಡೆಸಿದೆ. ನಾವು ಹಲವು ವಿಷಯಗಳನ್ನು ಪ್ರಸ್ತಾಪಿಸಿದ್ದು, ಕೆಲವು ಸಲಹೆಗಳನ್ನು ವಿಧೇಯಕದಲ್ಲಿ ತಿದ್ದುಪಡಿಗೆ ಪರಿಗಣಿಸಿರುವುದು ಸ್ವಾಗತಾರ್ಹ. ಆದರೆ, ಇನ್ನು ಕೆಲವು ಸಲಹೆಗಳನ್ನು ಪರಿಗಣಿಸದಿರುವುದರಿಂದ ನಮ್ಮ ಅಸಹಮತವನ್ನು ಸಮಿತಿಗೆ ಸಲ್ಲಿಸುತ್ತಿದ್ದೇವೆ. ಇದನ್ನು ಪರಿಗಣಿಸಿ ವಿಧೇಯಕದಲ್ಲಿ ಸೂಕ್ತ ಬದಲಾವಣೆ ತರುವಂತೆ ಅವರು ಮನವಿ ಮಾಡಿದ್ದಾರೆ.

ರಾಜ್ಯದ ಆರೋಗ್ಯ ಕ್ಷೇತ್ರದ ಸುಧಾರಣೆಗೆ ಸರಕಾರಿ ಆಸ್ಪತ್ರೆಗಳನ್ನು ಈ ವಿಧೇಯಕದಲ್ಲಿ ಸೇರಿಸಬೇಕು. ಸರಕಾರಿ ಆಸ್ಪತ್ರೆಗಳನ್ನು ಸುಸಜ್ಜಿತಗೊಳಿಸಿ ವೈದ್ಯರು ಮತ್ತು ಸಿಬ್ಬಂದಿಗಳನ್ನು ಜವಾಬ್ದಾರರಾಗಿಸುವ ಪ್ರಯತ್ನವಾದಲ್ಲಿ ರೋಗಿಗಳು ಖಾಸಗಿ ಆಸ್ಪತ್ರೆಗಳನ್ನು ಅವಲಂಬಿಸುವುದು ಕಡಿಮೆಯಾಗುತ್ತದೆ. ನ್ಯಾ.ವಿಕ್ರಮ್‌ಜೀತ್ ಸೇನ್ ಸಮಿತಿಯ ಶಿಫಾರಸ್ಸು ಇದಾಗಿದ್ದು, ಸಾರ್ವಜನಿಕರ ಅಭಿಪ್ರಾಯವು ಇದಾಗಿದೆ. ಈ ಹಿನ್ನೆಲೆಯಲ್ಲಿ ಸರಕಾರಿ ಆಸ್ಪತ್ರೆಗಳಿಗೂ ಅನ್ವಯವಾಗುವ ರೀತಿಯಲ್ಲಿ ಈ ವಿಧೇಯಕವನ್ನು ರಚಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಕೇಂದ್ರ ಸರಕಾರ 2010ರಲ್ಲಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮವನ್ನು ತಂದಿದ್ದು ಈಗಾಗಲೆ ದೇಶದ ಅನೇಕ ರಾಜ್ಯಗಳು ಕೇಂದ್ರದ ವಿಧೇಯಕವನ್ನು ಒಪ್ಪಿ ಜಾರಿಗೆ ತಂದಿವೆ. ರಾಜ್ಯ ಸರಕಾರವು ಭಾರತ ಸರಕಾರದ ‘ವೈದ್ಯಕೀಯ ಸಂಸ್ಥೆಗಳ ಅಧಿನಿಯಮ 2010’ಅನ್ನು ಜಾರಿಗೊಳಿಸಬೇಕೆಂದು ಬಿಜೆಪಿ ಸದಸ್ಯರು ಕೋರಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ವೈದ್ಯಕೀಯ ಸಂಸ್ಥೆಗಳ ಗುಣಮಟ್ಟದ ನಿಯಂತ್ರಣಕ್ಕಾಗಿ ಇರುವ ಕರ್ನಾಟಕ ಮೆಡಿಕಲ್ ಕೌನ್ಸಿಲ್ ಮತ್ತು ಇತರ ಸರಕಾರದ ಸಂಸ್ಥೆಗಳನ್ನು ಶಕ್ತಿಯುತ ಸಂಸ್ಥೆಗಳನ್ನಾಗಿ ಮಾಡಲು ಅಗತ್ಯ ಪ್ರಯತ್ನ ಆಗಬೇಕು. ಅಲ್ಲದೆ, ರಾಜ್ಯದಲ್ಲಿ ಇರುವ ಖಾಸಗಿ ವೈದ್ಯಕೀಯ ಸಂಸ್ಥೆಗಳನ್ನು ವರ್ಗೀಕರಿಸಲು ಮತ್ತು ವರ್ಗೀಕರಣದ ಆಧಾರದ ಮೇಲೆ ಸರಕಾರದ ಮಾರ್ಗಸೂಚಿಗಳು ರಚಿತವಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈಗಾಗಲೇ ಅಸ್ತಿತ್ವದಲ್ಲಿರುವ ಎಂಸಿಐ ಮತ್ತು ಕೆಎಂಸಿ ಕಾಯ್ದೆಗಳು ಹಾಗೂ ಗ್ರಾಹಕರ ನ್ಯಾಯಾಲಯ, ಸಿವಿಲ್ ನ್ಯಾಯಾಲಯ ಮತ್ತು ಲೋಕಾಯುಕ್ತ ಕುಂದುಕೊರತೆಗಳ ಪರಿಹಾರ ಮತ್ತು ವ್ಯಾಜ್ಯಗಳನ್ನು ಬಗೆಹರಿಸಲು ಕೆಲಸ ಮಾಡುತ್ತಿರುವುದರಿಂದ ಜಿಲ್ಲಾ ಅಥವಾ ಮಹಾನಗರ ಕುಂದು ಕೊರತೆ ಪರಿಹಾರ ಸಮಿತಿಯ ರಚನೆಯ ಪ್ರಸ್ತಾವನೆಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸರಕಾರಿ ಆಸ್ಪತ್ರೆಗಳಲ್ಲಿ ವಿವಿಧ ವೈದ್ಯಕೀಯ ಚಿಕಿತ್ಸೆಗಳಿಗೆ ರೋಗಿಗಳಿಗೆ ತಗಲುವ ನಿಖರ ವೆಚ್ಚವನ್ನು ಗುರುತಿಸಿಕೊಂಡು ಖಾಸಗಿ ಆಸ್ಪತ್ರೆಗಳಲ್ಲಿ ದರ ನಿಗದಿ ಮಾಡುವಾಗ ಸರಕಾರಿ ಆಸ್ಪತ್ರೆ ವೆಚ್ಚವನ್ನು ಪ್ರಮುಖ ಅಂಶವಾಗಿ ಪರಿಗಣಿಸಬೇಕು. ರಾಜ್ಯ ಖಾಸಗಿ ವೈದ್ಯಕೀಯ ಸಂಸ್ಥೆಗಳ ವಿಧೇಯಕದಲ್ಲಿ ಕಾರಾಗೃಹವಾಸ ಶಿಕ್ಷೆ ವಿಧಿಸಬಹುದೆಂಬ ವಿಷಯವನ್ನು ಕೈಬಿಡಬೇಕು. ದೂರಿನ ವಿಚಾರಣೆಯ ಹಿನ್ನೆಲೆಯಲ್ಲಿ ನ್ಯಾಯಾಲಯಗಳು ವಿಧಿಸುವ ದಂಡ/ಶಿಕ್ಷೆ ಜಾರಿಗೊಳ್ಳುವಂತಾಗಬೇಕು ಎಂದು ಬಿಜೆಪಿ ಸದಸ್ಯರು ಮನವಿ ಮಾಡಿದ್ದಾರೆ.

ಈ ಸಮಿತಿಯು ಇನ್ನು ಹೆಚ್ಚಿನ ಅಧ್ಯಯನ ಮಾಡುವ ಅಗತ್ಯತೆಯಿದೆ. ಕಾನೂನು ತಜ್ಞರಾದ ನ್ಯಾ.ಸಂತೋಷ್‌ಹೆಗ್ಡೆ ಹಾಗೂ ಇತರರು ಮತ್ತು ವಿಷಯ ತಜ್ಞರ ಜೊತೆಯಲ್ಲಿ ಸಮಾಲೋಚಿಸುವುದು ಮತ್ತು ದೇಶದ ಬೇರೆ ರಾಜ್ಯಗಳಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಮಾಡಿರುವ ಸುಧಾರಣೆಯನ್ನು ಅಧ್ಯಯನ ಮಾಡುವುದು ಅವಶ್ಯಕತೆ ಇದೆ ಎಂದು ಬಿಜೆಪಿ ಸದಸ್ಯರು ತಮ್ಮ ಪತ್ರದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X