ರೈತರು ಆತ್ಮಹತ್ಯೆಗೆ ಶರಣಾಗದಿರಿ: ಸಚಿವ ಮಲ್ಲಿಕಾರ್ಜುನ್ ಮನವಿ
ದಾವಣಗೆರೆ, ಅ.3: ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಪರಿಹಾರದ ಚೆಕ್‌ಗಳನ್ನು ವಿತರಿಸಿದರು.
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಬೆಳೆ ನಷ್ಟ ಅನುವಿಸಿದ 7 ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಅದರಲ್ಲಿ ನಾಲ್ವರು ರೈತ ಕುಟುಂಬಗಳ ವಾರಸುದಾರರಿಗೆ ಈಗಾಗಲೇ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂ. ಪರಿಹಾರ ನೀಡಿದ್ದು, ಉಳಿದ 3 ಕುಟುಂಬಗಳ ವಾರಸುದಾರರಿಗೆ ಸಚಿವರು ಪರಿಹಾರದ ಚೆಕ್ ವಿತರಿಸಿದರು.
ಈ ವೇಳೆ ಮಾತನಾಡಿದ ಸಚಿವರು, ರೈತರು ಸಾಲಕ್ಕೆ ಎದೆಗುಂದಿ ಆತ್ಮಹತ್ಯೆಗೆ ಮುಂದಾಗದೇ ಧೈರ್ಯವಾಗಿ ಜೀವನ ನಡೆಸಬೇಕು. ರೈತರೊಂದಿಗೆ ನಮ್ಮ ಸರಕಾರವಿದೆ ಎಂದರು. ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರ ರೈತರ ಪರವಾಗಿದ್ದು, ರೈತರ ಹಿತರಕ್ಷಣೆಗೆ ಬದ್ಧವಾಗಿದೆ. ರೈತರ ಅನುಕೂಲಕ್ಕಾಗಿ ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳ ವತಿಯಿಂದ ಅನೇಕ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಅವುಗಳ ಪ್ರಯೋಜನ ಪಡೆಯಬೇಕೆಂದು ಅವರು ತಿಳಿಸಿದರು.
Next Story





