Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 230 ಕೋಟಿ ರೂ.ಗಳ ವೆಚ್ಚದಲ್ಲಿ ನೂತನ...

230 ಕೋಟಿ ರೂ.ಗಳ ವೆಚ್ಚದಲ್ಲಿ ನೂತನ ವೈದ್ಯಕೀಯ ಕಾಲೇಜು ಸ್ಥಾಪನೆ

ವಾರ್ತಾಭಾರತಿವಾರ್ತಾಭಾರತಿ5 Oct 2017 10:25 PM IST
share

ಬೆಂಗಳೂರು, ಅ.5: ನಗರದ ಬೌರಿಂಗ್ ಆಸ್ಪತ್ರೆಯಲ್ಲಿ 230 ಕೋಟಿ ರೂ.ಗಳ ವೆಚ್ಚದಲ್ಲಿ ನೂತನ ವೈದ್ಯಕೀಯ ಕಾಲೇಜಿಗೆ ಅಕ್ಟೋಬರ್ ಅಂತ್ಯದ ವೇಳೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಹಜ್ ಖಾತೆ ಸಚಿವ ಆರ್.ರೋಷನ್‌ಬೇಗ್ ಇಂದಿಲ್ಲಿ ತಿಳಿಸಿದ್ದಾರೆ.

ಗುರುವಾರ ಪುಲುಕೇಶಿ ನಗರದ ವಿಧಾನಸಭಾ ಕ್ಷೇತ್ರದಲ್ಲಿ ಫಲಾನುಭವಿಗಳಿಗೆ ಯಶಸ್ವನಿ ಕಾರ್ಡ್ ವಿತರಿಸಿ ಮಾತನಾಡಿದ ಅವರು, ರಾಜ್ಯದ ಎಲ್ಲರಿಗೂ ಆರೋಗ್ಯ ಸೇವೆ ಒದಗಿಸಲು ರಾಜ್ಯ ಸರಕಾರ ತಯಾರಿದೆ. ಈ ನಿಟ್ಟಿನಲ್ಲಿ ಯೂನಿವರ್ಸಲ್ ಹೆಲ್ತ್‌ಕಾರ್ಡ್ ಯೋಜನೆ ಜಾರಿ ಮಾಡಲಾಗುತ್ತಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಇದೀಗ ಕಾರ್ಯನಿರ್ವಹಿಸುತ್ತಿರುವ ವೈದ್ಯಕೀಯ ಕಾಲೇಜುಗಳ ಜೊತೆಗೆ ಬೋರಿಂಗ್ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಾಣ ಮಾಡಲಿರುವ ವೈದ್ಯಕೀಯ ಕಾಲೇಜು ಸೇರ್ಪಡೆಯಾಗಲಿದೆ. ಇದರಿಂದ ನೂರಾರು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವಕಾಶದಿಂದ ವಂಚಿತರಾಗುವುದನ್ನು ತಪ್ಪಿಸಬಹುದಾಗಿದೆ ಎಂದು ಅವರು ತಿಳಿಸಿದರು.

ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ: ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ಸರಕಾರದ ಸಾಧನೆಗಳನ್ನು ಜನರ ಮನೆ ಮನೆ ತಲುಪಿಸಲಾಗುತ್ತಿದೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಂದು ಬಾರಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು, ಅಧಿಕಾರ ನಡೆಸಲಿದೆ ಎಂದು ಸಚಿವ ಬೇಗ್ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರು ನಗರ ಅಭಿವೃದ್ಧಿಗಾಗಿ ಸರಕಾರದಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಬಿಬಿಎಂಪಿಗೆ 7 ಸಾವಿರ ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಅಲ್ಲದೆ, ತ್ವರಿತ ಗತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.

ಮಾಜಿ ಶಾಸಕ ಪ್ರಸನ್ನ ಕುಮಾರ್ ಮಾತನಾಡಿ, ಬಿಪಿಎಲ್ ಕಾರ್ಡ್ ಹೊಂದಿರುವ ಎಲ್ಲ ಬಡವರಿಗೆ ಯಶಸ್ವಿನಿ ಕಾರ್ಡ್ ಸಹಕಾರಿಯಾಗಲಿದ್ದು, ನಗರದ 70 ಆಸ್ಪತ್ರೆಗಳಲ್ಲಿ ಸಾರ್ವಜನಿಕರು ಆರೋಗ್ಯ ಸೇವೆ ಪಡೆದುಕೊಳ್ಳಬಹುದಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಬಿಬಿಎಂಪಿ ಸದಸ್ಯ ಝಾಕೀರ್, ಕಾಂಗ್ರೆಸ್ ಮುಖಂಡರಾದ ವಿ.ಏಳುಮಲೈ, ವರುಣ್ ಪ್ರಸನ್ನ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X