ಸಾಂಸ್ಕೃತಿಕ ಸೌರಭ ಕಾರ್ಯಕ್ರಮ
ಉಡುಪಿ, ಅ.6: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವು ಅ.9ರಂದು ಬೆಳಗ್ಗೆ 10:30ಕ್ಕೆ ಬೈಂದೂರು ರೋಟರಿ ಸಮುದಾಯ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಬೈಂದೂರು ಶಾಸಕರು ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಕೆ.ಗೋಪಾಲ ಪೂಜಾರಿ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
Next Story





