ಮೀಟರ್ ಬಡ್ಡಿ ದಂಧೆ: ಆರೋಪಿಯ ಬಂಧನ

ಬೆಂಗಳೂರು, ಅ.7: ಮೀಟರ್ ಬಡ್ಡಿ ದಂಧೆ ನಡೆಯುತ್ತಿದ್ದ ಬಗ್ಗೆ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಇಲ್ಲಿನ ವೈಟ್‌ಫೀಲ್ಡ್ ವಿಭಾಗದ ಕೆ.ಆರ್.ಪುರ ಠಾಣೆ ಪೊಲೀಸರು ವ್ಯಕಿಯೊಬ್ಬರನ್ನು ಬಂಧಿಸಿ, ಖಾಲಿ ಚೆಕ್ ಹಾಗೂ ಕೆಲವು ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ.
ನಗರದ ಕೆಆರ್ ಪುರದ ದೇವಸಂದ್ರದ ನಿವಾಸಿ ಜೆ.ಪ್ರಕಾಶ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಪ್ರಕಾಶ್ ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದಾರೆ ಎಂಬ ದೂರು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೆ.ಆರ್.ಪುರ ಠಾಣೆ ಪೊಲೀಸರು ಈತನ ಮನೆ ಮೇಲೆ ದಾಳಿ ಮಾಡಿ ಖಾಲಿ ಚೆಕ್ ಹಾಗೂ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
Next Story





