ಯುವಕ ಆತ್ಮಹತ್ಯೆ
ಬೆಂಗಳೂರು, ಅ.7: ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಮಲ್ಲೇಶ್ವರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಮಲ್ಲೇಶ್ವರಂನ 11ನೆ ಕ್ರಾಸ್ ನಿವಾಸಿ ಮಂಜುನಾಥ್(25) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಪೊಲೀಸರು ಗುರುತಿಸಿದ್ದಾರೆ.
ಮಂಜುನಾಥ್ ಈ ಹಿಂದೆ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ತದನಂತರ ವ್ಯಕ್ತಿಯೊಬ್ಬರ ಜತೆ ಸೇರಿ ವ್ಯವಹಾರ ನಡೆಸುತ್ತಿದ್ದರು. ಅದರಲ್ಲಿ ನಷ್ಟ ಉಂಟಾದ ಪರಿಣಾಮ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.
ಮಂಜುನಾಥ್ ಅವರು ದಿನೇ ದಿನೇ ಆರ್ಥಿಕ ಸಂಕಷ್ಟ ಎದುರಾದುದ್ದರಿಂದ ನೊಂದು ಶುಕ್ರವಾರ ಸಂಜೆ ಮನೆಯಲ್ಲಿ ಪ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದು ಬಂದಿದೆ.
ಈ ಸಂಬಂಧ ಮಲ್ಲೇಶ್ವರಂ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





