ಸ್ನೇಹಿತರ ನಡುವೆ ಜಗಳ: ಒಬ್ಬನ ಕೊಲೆಯಲ್ಲಿ ಅಂತ್ಯ
ಬೆಂಗಳೂರು, ಅ.7: ಸ್ನೇಹಿತರ ನಡುವೆ ಕ್ಷುಲ್ಲಕ ವಿಚಾರಕ್ಕೆ ಜಗಳ ನಡೆದು ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ದುರ್ಘಟನೆ ಕಾಟನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಫ್ಲವರ್ ಗಾರ್ಡನ್ ನಿವಾಸಿ ಅಜಿತ್(19) ಕೊಲೆಯಾದ ಯುವಕನಾಗಿದ್ದು, ಈತ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ಬೆಳಗ್ಗೆ 8:30 ಸುಮಾರಿಗೆ ಮನೆ ಸಮೀಪ ಈತ ಹಾಗೂ ಸ್ನೇಹಿತರ ನಡುವೆ ಕ್ಷುಲ್ಲಕ ವಿಚಾರವಾಗಿ ಜಗಳವಾಗಿದೆ. ಈ ವೇಳೆ ಅಜಿತ್ ತೊಡೆಗೆ ಚಾಕುನಿಂದ ಇರಿದು ಪರಾರಿಯಾಗಿದ್ದರು ಎನ್ನಲಾಗಿದೆ. ಬಳಿಕ ಈತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಸಂಜೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಕಾಟನ್‌ಪೇಟೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಚಾಕುನಿಂದ ಇರಿದು ಪರಾರಿಯಾಗಿರುವವರ ಬಗ್ಗೆ ಸುಳಿವಿದ್ದು, ಶೀಘ್ರದಲ್ಲೇ ಅವರನ್ನು ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
Next Story





