ಹುಲಿ ದಾಳಿ: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸಿಬ್ಬಂದಿ ಮೃತ್ಯು

ಆನೇಕಲ್, ಅ.7: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸಿಬ್ಬಂದಿ ಮೇಲೆ ಹುಲಿಯೊಂದು ಏಕಾಏಕಿ ದಾಳಿ ನಡೆಸಿ ಕೊಂದಿರುವ ಘಟನೆ ಉದ್ಯಾನವನದ ಸಫಾರಿ ವೈಟ್ ಗೇಟ್ ಬಳಿ ಶನಿವಾರ ನಡೆದಿದೆ.
ಉದ್ಯಾನವನದಲ್ಲಿ ಗೇಟ್ ಕೀಪರ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಆಂಜನೇಯ(25) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ಆಂಜನೇಯ ಸಫಾರಿ ಗೇಟ್ ಬಳಿ ಸ್ವಚ್ಛತಾ ಕಾರ್ಯದಲ್ಲಿ ನಿರತನಾಗಿದ್ದ ವೇಳೆ ಹುಲಿಯೊಂದು ಏಕಾಏಕಿ ಮೈಮೇಲೆ ಎರಗಿ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.
Next Story





