Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು: ಕರಾವಳಿ ಭಾಗಕ್ಕೆ ಪ್ರತ್ಯೇಕ...

ಪುತ್ತೂರು: ಕರಾವಳಿ ಭಾಗಕ್ಕೆ ಪ್ರತ್ಯೇಕ ಮರಳು ನೀತಿಗೆ ಆಗ್ರಹಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ7 Oct 2017 7:37 PM IST
share
ಪುತ್ತೂರು: ಕರಾವಳಿ ಭಾಗಕ್ಕೆ ಪ್ರತ್ಯೇಕ ಮರಳು ನೀತಿಗೆ ಆಗ್ರಹಿಸಿ ಧರಣಿ

ಪುತ್ತೂರು, ಅ. 7: ಏಕರೂಪದ ಮರಳು ನೀತಿಯನ್ನು ಕೈಬಿಟ್ಟು ಕರಾವಳಿ ಭಾಗದ ಮೂರು ಜಿಲ್ಲೆಗಳಿಗೆ ಪ್ರತ್ಯೇಕ ಮರಳು ನೀತಿ ರೂಪಿಸದಿದ್ದರೆ ಮರಳು ಸಾಗಾಟದ ಲಾರಿಗಳನ್ನು ರಸ್ತೆಯಲ್ಲಿ ತಡೆದು  ಪ್ರತಿಭಟಸಲಾಗುವುದು ಎಂದು ಪುತ್ತೂರಿನ ಸಾರ್ವಜನಿಕ ಹಿತರಕ್ಷಣಾ ಸಮಿತಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ತಿಳಿಸಿದರು.

ಮರಳು ವಿಚಾರದಲ್ಲಿ ರಾಜ್ಯ ಸರ್ಕಾರ ಅನುಸರಿಸುತ್ತಿರುವ ಜನವಿರೋಧಿ ನೀತಿ ಮತ್ತು ಜಿಲ್ಲಾಡಳಿತದ ನಿರ್ಲಕ್ಷ್ಯ ಧೋರಣೆಯನ್ನು ವಿರೋಧಿಸಿ ಸಾರ್ವಜನಿಕ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಶನಿವಾರ ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಸರ್ಕಾರಿ ವ್ಯವಸ್ಥೆಯಡಿಯಲ್ಲಿ ಮನೆ ನಿರ್ಮಿಸುವ ಬಡವರಿಗೆ, ದುಡಿದು ಬದುಕುವ ಕೂಲಿ ಕಾರ್ಮಿಕರಿಗೆ ಅನುಕೂಲವಾಗುವಂತೆ ಮರಳು ನೀತಿ ಜಾರಿಗೊಳಿಸಬೇಕಾಗಿದ್ದ ರಾಜ್ಯ ಸರ್ಕಾರ ಸಚಿವರುಗಳ ಜೇಬು ತುಂಬಿಸುವ, ಉದ್ಯಮಿಗಳ ಜೊತೆ ಶಾಮೀಲಾಗಿ ಕೃತಕ ಮರಳು ಅಭಾವ ಸೃಷ್ಟಿಸುವ ಮೂಲಕ ಮರಳು ಹಗರಣ ಹುಟ್ಟುಹಾಕುವ ಕೆಲಸ ಮಾಡುತ್ತಿದೆ. ಚುನಾವಣೆಗೆ ಹಣ ಜೋಡಿಸುವ ಕೆಲಸ ಕರಾವಳಿ ಭಾಗದ ಈ ಮರಳು ಮಾಫಿಯಾದಿಂದ ನಡೆಯುತ್ತಿದೆ ಎಂದು ತಿಳಿಸಿದರು.

ಬಜರಂಗದಳ ಮಂಗಳೂರು ವಿಭಾಗದ ಗೋರಕ್ಷಕ್ ಪ್ರಮುಖ್ ಮುರಳೀಕೃಷ್ಣ ಹಸಂತಡ್ಕ ಅವರು ಮಾತನಾಡಿ ರಾಜ್ಯ ಸರ್ಕಾರ ಸಚಿವರುಗಳ ಮತ್ತು ಪ್ರಭಾವಿಗಳ ಜೇಬು ತುಂಬಿಸುವ ಸಲುವಾಗಿಯೇ ಕೃತಕ ಮರಳು ಅಭಾವ ಸೃಷ್ಠಿಸಿ ಜನ ಸಾಮಾನ್ಯರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ. ಮುಂದಿನ ಶನಿವಾರದೊಳಗೆ ಮರಳು ನೀತಿಯನ್ನು ಸರಿಪಡಿಸದಿದ್ದರೆ  ಜಿಲ್ಲಾಧಿಕಾರಿಗಳ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಹೋರಾಟ ನಡೆಸಲಾಗುವುದು ಎಂದರು.

ಪುತ್ತೂರಿನ ವೈದ್ಯ ಡಾ.ಎಂ.ಕೆ.ಪ್ರಸಾದ್ ಭಂಡಾರಿ ಅವರು ಮಾತನಾಡಿ ಜಿಲ್ಲೆಯ ಜನತೆ ಮರಳು ಸಿಗದೆ ಪರದಾಡುತ್ತಿದ್ದರೆ ಜಿಲ್ಲೆಯ ಉಸ್ತುವಾರಿ ಸಚಿವರು ಮದುವೆ, ಮುಂಜಿ, ಸಾವು, ಹುಲಿ ವೇಷದಲ್ಲಿ ತಲ್ಲೀನರಾಗಿದ್ದಾರೆ. ಮುಂದಿನ ಚುನಾವಣೆಗೆ ಹಣಗೂಡಿಸುವುದು ಓಟಿಗಾಗಿ ಕೆಲಸ ಮಾಡುವುದೇ ಅವರ ಕೆಲಸವಾಗಿದೆ. ಅರಣ್ಯ ಸಚಿವರಾದ ಅವರಿಗೆ ಅರಣ್ಯ ಇಲಾಖೆಯ ಕಚೇರಿ ಎಲ್ಲಿದೆ ಎಂದು ಗೊತ್ತಿದೆಯೇ ಇಲ್ಲವೋ, ಅವರು ತಿರುಗುತ್ತಾ ರಾಜಕೀಯ ಮಾಡುತ್ತಿದ್ದಾರೆ. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಲು ಅವರಿಗೆ ಸಮಯವಿಲ್ಲ ಎಂದರು.

ಪುತ್ತೂರು ತಾಲ್ಲೂಕು ಲಾರಿ ಚಾಲಕ ಮಾಲಕರ ಸಂಘದ ಅಧ್ಯಕ್ಷ ಗಿರೀಶ್ ಪಡ್ಡಾಯೂರು ಅವರು ಮಾತನಾಡಿ ರೂ.2 ಸಾವಿರ ಬಾಡಿಗೆಗಾಗಿ ಮರಳು ಸಾಗಿಸುವ ಲಾರಿ ಚಾಲಕರು ಜೈಲಿಗೆ ಹೋಗಬೇಕಾಗಿದೆ. ಆದರೆ ಮರಳಿನಿಂದ ಕೋಟಿ ಕೋಟಿ ಸಂಪಾದಿಸುವವರಿಗೆ ಯಾವುದೇ ಕಾನೂನು ಶಿಕ್ಷೆ ಇಲ್ಲ ಎಂದರು. ಈ ಹೋರಾಟಕ್ಕೆ ಲಾರಿ ಚಾಲಕರ ಸಂಪೂರ್ಣ ಬೆಂಬಲವಿದ್ದು, ಎಷ್ಟು ದಿನ ಬೇಕಾದರೂ ರಸ್ತೆಯಲ್ಲಿ ಮಲಗಿ ಪ್ರತಿಭಟನೆ ನಡೆಸಲು ನಾವು ಸಿದ್ದರಿದ್ದೇವೆ ಎಂದರು.

ನಗರಸಭೆಯ ಉಪಾಧ್ಯಕ್ಷ ವಿಶ್ವನಾಥ ಗೌಡ, ಬನ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಮಣಿ ಡಿ.ಗಾಣಿಗ, ಪುತ್ತೂರು ಎಂಜಿನಿಯರ್ಸ್‌ ಎಸೋಶಿಯೇಸನ್‌ನ ವಸಂತ ಭಟ್ ಅವರು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಪುತ್ತೂರು ಸಾರ್ವಜನಿಕ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ರಾಕೇಶ್ ನಾಕ್ ಪರ್ಲಡ್ಕ, ಉದ್ಯಮಿ ಜಯಕುಮಾರ್, ಮುಖಂಡರಾದ ಪುರುಷೋತ್ತಮ ಗೌಡ, ಉಮ್ಮರ್ ನರಿಮೊಗ್ರು ಮತ್ತಿತರರು ಇದ್ದರು.

ಪ್ರತಿಭಟನೆಗೆ ಮೊದಲು ಪ್ರತಿಭಟನಕಾರರು ಪುತ್ತೂರಿನ ದರ್ಭೆಯಿಂದ ಮುಖ್ಯರಸ್ತೆಯಾಗಿ ಮಿನಿವಿಧಾನ ಸೌಧವರೆಗೆ ಜಾಥಾ ನಡೆಸಿದರು. ಈ ಜಾಥಾ ವನ್ನು ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಉದ್ಘಾಟಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X