ಚಿಕ್ಕಮಗಳೂರು: ಜಿಲ್ಲಾಧಿಕಾರಿ ಜಿ.ಸತ್ಯವತಿ ವರ್ಗಾವಣೆ

ಚಿಕ್ಕಮಗಳೂರು, ಅ.7: ಕಳೆದ ಹದಿನೈದು ತಿಂಗಳ ಹಿಂದೆ ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿದ್ದ ಜಿ.ಸತ್ಯವತಿ ಕೋಲಾರ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ಎಂ.ಕೆ.ಶ್ರೀರಂಗಯ್ಯರವರನ್ನು ರಾಜ್ಯ ಸರಕಾರ ನೇಮಕಗೊಳಿಸಿ ಆದೇಶ ಹೊರಡಿಸಿದೆ.
ಕಳೆದ ಜೂ.24ರಂದು ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ಜಿ.ಸತ್ಯವತಿ ಅಧಿಕಾರವನ್ನು ವಹಿಸಿಕೊಂಡಿದ್ದರು. ಅವರು ದಕ್ಷತೆಯಿಂದ ಕತೌಯ ನಿರ್ವಹಿಸಿದ್ದು, ಕೆಲವು ಅಕ್ರಮ ಚಟುವಟಿಕೆಗಳಿಗೆ ಪೂರ್ಣ ವಿರಾಮ ಹಾಕಿದ್ದರು. ಕಲ್ಲು ಗಣಿಗಾರಿಕೆ ನಡೆಯದಂತೆ ಎಚ್ಚರ ವಹಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ವರ್ಗಾವಣೆಗೊಳಿಸಲಾಗಿದೆ ಎನ್ನಲಾಗುತ್ತಿದೆ.
ಜಿ.ಸತ್ಯವತಿ ಅವರ ಸ್ಥಾನಕ್ಕೆ ಚಿತ್ರದುರ್ಗದಲ್ಲಿ ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಎಂ.ಕೆ.ಶ್ರೀರಂಗಯ್ಯರವರನ್ನು ನೇಮಕಗೊಳಿಸಲಾಗಿದೆ.
Next Story





