ಅ.9ರಂದು ಬಿಜೆಪಿಯಿಂದ ಪಾದಯಾತ್ರೆ

ಬೆಂಗಳೂರು, ಅ.8: ಕೇರಳದಲ್ಲಿ ನಡೆಯುತ್ತಿರುವ ಜನರಕ್ಷಾ ಯಾತ್ರೆಯನ್ನು ಬೆಂಬಲಿಸಿ ನಗರದಲ್ಲಿ ಅ.9ರಂದು ಬೆಳಗ್ಗೆ 10 ಗಂಟೆಗೆ ಲಾಲ್‌ಬಾಗ್ ಪಶ್ಚಿಮದ್ವಾರದಿಂದ ಬಸವನಗುಡಿಯಲ್ಲಿರುವ ಸಿಪಿಎಂ ಕಚೇರಿಗೆ ಬಿಜೆಪಿ ಪಾದಯಾತ್ರೆ ಹಮ್ಮಿಕೊಂಡಿದೆ.
ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಅರವಿಂದ ಲಿಂಬಾವಳಿ, ಶೋಭಾ ಕರಂದ್ಲಾಜೆ, ಸಿ.ಟಿ.ರವಿ, ಎನ್.ರವಿಕುಮಾರ್, ಕಾರ್ಯದರ್ಶಿ ಜಯದೇವ್, ಬೆಂಗಳೂರು ನಗರ ಅಧ್ಯಕ್ಷ ಪಿ.ಎನ್.ಸದಾಶಿವ, ನಗರ ಜಿಲ್ಲೆ ಅಧ್ಯಕ್ಷ ಮುನಿರಾಜು ಸೇರಿದಂತೆ ಇನ್ನಿತರ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





